Ration Card Correction 2025: ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ.! ತಕ್ಷಣ ಅರ್ಜಿ ಸಲ್ಲಿಸಿ ಕೊನೆಯ ದಿನಾಂಕ ಇದೆ.?
ಪಡಿತರ ಚೀಟಿ ತಿದ್ದುಪಡಿ ಮಾಡಲು ಇದೀಗ ಅವಕಾಶ ಮಾಡಿಕೊಡಲಾಗಿದೆ ಆದ್ದರಿಂದ ಆಸಕ್ತಿ ಇರುವಂತಹ ಕುಟುಂಬಗಳು ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡಬಹುದು ಎಂದು ನಮ್ಮ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಇದೀಗ ಸ್ಪಷ್ಟ ಮಾಹಿತಿ ನೀಡಿದೆ. ಹಾಗಾಗಿ ನಾವು ಈ ಲೇಖನ ಮೂಲಕ ಪಡಿತರ ಚೀಟಿಯಲ್ಲಿ ಅಥವಾ ರೇಷನ್ ಕಾರ್ಡ್ ತಿದ್ದುಪಡಿಯಲ್ಲಿ ಯಾವುದು ಬದಲಾವಣೆ ಮಾಡಬಹುದು ಹಾಗೂ ತಿದ್ದುಪಡಿ ಮಾಡಲು ಇರುವ ಕೊನೆಯ ದಿನಾಂಕದ ಬಗ್ಗೆ ಮಾಹಿತಿ ತಿಳಿಯೋಣ
ಪಡಿತರ ಚೀಟಿ ತಿದ್ದುಪಡಿ ಪ್ರಾರಂಭ (Ration Card Correction 2025)..?
ಹೌದು ಸ್ನೇಹಿತರೆ, ಪಡಿತರ ಚೀಟಿಯಲ್ಲಿ ನಿಮ್ಮ ಕುಟುಂಬದ ಹೊಸ ಸದಸ್ಯರನ್ನು ಸೇರ್ಪಡೆ ಮಾಡಲು ಬಯಸುತ್ತಿದ್ದೀರಾ ಹಾಗೂ ಪಡಿತರ ಚೀಟಿಯಲ್ಲಿ ಯಾವುದೇ ಬದಲಾವಣೆ ಮಾಡಲು ಬಯಸುತ್ತಿದ್ದರೆ ನಿಮಗೆ ಇದೀಗ ಸಿಹಿ ಸುದ್ದಿ.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜನರಿಗೆ ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡಲು ಇದೀಗ ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ರೇಷನ್ ಕಾರ್ಡ್ ನಲ್ಲಿ ಯಾವುದೇ ಬದಲಾವಣೆ ಅಥವಾ ತಿದ್ದುಪಡಿ ಮಾಡಲು ಬಯಸುವಂತಹ ಜನರು ಕೂಡಲೇ ಆನ್ಲೈನ್ ಸೆಂಟರ್ಗಳಿಗೆ ಭೇಟಿ ನೀಡಿ ತಿದ್ದುಪಡಿ ಮಾಡಿಸಬಹುದು
ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸುವುದು ಹೇಗೆ..?
ರೇಷನ್ ಕಾರ್ಡ್ ನಲ್ಲಿ ಯಾವುದೇ ರೀತಿ ಬದಲಾವಣೆ ಅಥವಾ ತಿದ್ದುಪಡಿ ಮಾಡಲು ನೀವು ಬಯಸುತ್ತಿದ್ದರೆ ದಿನಾಂಕ 30 ಜೂಲೈ 2025 ರವರೆಗೆ ಬೆಳಗ್ಗೆ ನೀವು 10 ಗಂಟೆಯ ನಂತರ ಹಾಗೂ ಸಾಯಂಕಾಲ 5:00 ಒಳಗಡೆ ನೀವು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಲ್ಲಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಬಹುದು ಹಾಗಾಗಿ ಆಸಕ್ತರು ಬೇಗ ಈ ದಿನಾಂಕದ ಒಳಗಡೆ ಪಡಿತರ ಚೀಟಿಯಲ್ಲಿ ಅಥವಾ ರೇಷನ್ ಕಾರ್ಡ್ ನಲ್ಲಿ ಯಾವುದೇ ಬದಲಾವಣೆ ಮಾಡುತ್ತಿದ್ದರು ಬೇಗ ಭೇಟಿ ನೀಡಿ ಮತ್ತು ತಿದ್ದುಪಡಿ ಮಾಡಲು ಬಯಸುವ ಕುಟುಂಬಗಳಿಗೆ ಈ ಲೇಖನೆಯನ್ನು ಶೇರ್ ಮಾಡಿ
ಪಡಿತರ ಚೀಟಿಯಲ್ಲಿ ಯಾವೆಲ್ಲ ತಿದ್ದುಪಡಿ ಮಾಡಲು ಅವಕಾಶವಿದೆ…?
- ಕುಟುಂಬದ ಹೊಸ ಸದಸ್ಯರ ಸೇರ್ಪಡೆ ಮಾಡಲು ಅವಕಾಶ
- ಕುಟುಂಬದ ಸದಸ್ಯರ ಹೆಸರು ತೆಗೆದು ಹಾಕಲು ಅಥವಾ ಡಿಲೀಟ್ ಮಾಡಲು ಅವಕಾಶ
- ರೇಷನ್ ಕಾರ್ಡ್ ನಲ್ಲಿ ಕುಟುಂಬದ ಸದಸ್ಯರ ಹೆಸರಿನಲ್ಲಿ ಯಾವುದೇ ಬದಲಾವಣೆ ಮಾಡಲು ಅವಕಾಶ
- ಪಡಿತರ ಚೀಟಿಯಲ್ಲಿ ಇರುವ ಸದಸ್ಯರ ಫೋಟೋ ಬದಲಾವಣೆ ಮಾಡಲು ಅವಕಾಶ
- ರೇಷನ್ ಕಾರ್ಡ್ ನಲ್ಲಿ ಇರುವ ನ್ಯಾಯಬೆಲೆ ಅಂಗಡಿ ಅಥವಾ ವಿಳಾಸದ ಬದಲಾವಣೆ ಮಾಡಲು ಅವಕಾಶ
- ಪಡಿತರ ಚೀಟಿಯಲ್ಲಿ ಇರುವಂತ ಕುಟುಂಬದ ಮುಖ್ಯಸ್ಥರ ಹೆಸರು ಬದಲಾವಣೆ ಮಾಡಲು ಅವಕಾಶ
- ಇತರೆ ಪಡಿತರ ಚೀಟಿ ತಿದ್ದುಪಡಿಗೆ ಸಂಬಂಧಿಸಿದಂತೆ ಯಾವುದೇ ರೀತಿ ಬದಲಾವಣೆ ಮಾಡಲು ಈಗ ಅವಕಾಶ ಮಾಡಿಕೊಡಲಾಗಿದೆ
ತಿದ್ದುಪಡಿ ಮಾಡಲು ಬೇಕಾಗುವ ಅಗತ್ಯ ದಾಖಲಾತಿಗಳು..?
- ಕುಟುಂಬದ ಸದಸ್ಯರ ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ಜನನ ಪ್ರಮಾಣ ಪತ್ರ (6 ವರ್ಷದ ಒಳಗಿನ ಮಕ್ಕಳಿಗೆ ಬೇಕಾಗುತ್ತದೆ)
- ಇತರೆ ಅಗತ್ಯ ದಾಖಲಾತಿಗಳು
ಸ್ನೇಹಿತರ ಈ ಮಾಹಿತಿ ನಿಮಗೆ ಉಪಯುಕ್ತವಾಗಿದ್ದರೆ ಆದಷ್ಟು ಈ ಲೇಖನಿಯನ್ನು ಶೇರ್ ಮಾಡಿ ಹಾಗೂ ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು
basava vasati yojana: ರಾಜ್ಯದ ಬಡ ಕುಟುಂಬಗಳಿಗೆ ಉಚಿತ ಮನೆ ಪಡೆಯಲು ಅರ್ಜಿ ಆಹ್ವಾನ.! ಉಚಿತ ಮನೆ ಭಾಗ್ಯ ಯೋಜನೆ