PM Ujjwala Yojana 2.0 Apply – ಪಿಎಂ ಉಜ್ವಲ ಯೋಜನೆಗೆ ಅರ್ಜಿ ಆಹ್ವಾನ.! ಮಹಿಳೆಯರಿಗೆ ಪ್ರತಿ ತಿಂಗಳು ರೂ.300 ಸಬ್ಸಿಡಿ ಸಿಗುತ್ತೆ
ನಮಸ್ಕಾರ ಗೆಳೆಯರೇ ಮಹಿಳೆಯರಿಗೆ ಇದೀಗ ಕೇಂದ್ರ ಸರ್ಕಾರದಿಂದ ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಮತ್ತೆ ಕೇಂದ್ರ ಸರ್ಕಾರ ವತಿಯಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವಂತಹ ಮಹಿಳೆಯರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತವಾಗಿ ಒಂದು ಸ್ಟಾವ್ ಹಾಗೂ ಗ್ಯಾಸ್ ಸಿಲೆಂಡರ್ ಉಚಿತವಾಗಿ ಸಿಗುತ್ತದೆ ಇದರ ಜೊತೆಗೆ ಪ್ರತಿ ತಿಂಗಳು ರೂ.300 ಸಬ್ಸಿಡಿ ಸಿಗುತ್ತೆ. ಇದಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನಿಯ ಮೂಲಕ ತಿಳಿದುಕೊಳ್ಳೋಣ
ಪ್ರಧಾನ ಮಂತ್ರಿ ಉಜ್ವಲ ಯೋಜನೆ (PM Ujjwala Yojana 2.0 Apply).?
ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಪಿಎಂ ಉಜ್ವಲ ಯೋಜನೆ ಅಥವಾ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಮೂಲಕ ನಮ್ಮ ಭಾರತ ದೇಶದ ಪ್ರತಿಯೊಂದು ಬಡ ಕುಟುಂಬಗಳಿಗೆ ಉಚಿತವಾಗಿ LPG ಗ್ಯಾಸ್ ಸಿಲೆಂಡರ್ ಕನೆಕ್ಷನ್ ನೀಡುವುದು ಈ ಒಂದು ಯೋಜನೆಯ ಪ್ರಮುಖ ಗುರಿಯಾಗಿತ್ತು. ಅದೇ ರೀತಿ ಇಲ್ಲಿವರೆಗೂ ಸುಮಾರು 20 ಮಿಲಿಯನ್ ಗಿಂತ ಹೆಚ್ಚು ಗ್ರಾಹಕರು ಈ ಯೋಜನೆ ಅಡಿಯಲ್ಲಿ ಉಚಿತವಾಗಿ ಎಲ್ಪಿಜಿ ಗ್ಯಾಸ್ ಸಿಲೆಂಡರ್ ಕನೆಕ್ಷನ್ ಪಡೆದುಕೊಂಡಿದ್ದಾರೆ

ಇದೀಗ ಮತ್ತೆ ಕೇಂದ್ರ ಸರ್ಕಾರ ಬಡ ಕುಟುಂಬದ ಮಹಿಳೆಯರಿಗೆ ಉಚಿತವಾಗಿ LPG ಗ್ಯಾಸ್ ಸಿಲೆಂಡರ್ ಕನೆಕ್ಷನ್ ಪಡೆದುಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವಂತಹ ಮಹಿಳೆಯರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು, ಹೌದು ಗೆಳೆಯರೇ ನಾವು ಈ ಯೋಜನೆಗೆ ಯಾವ ರೀತಿ ಅರ್ಜಿ ಸಲ್ಲಿಕೆ ಮಾಡಬೇಕು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಮತ್ತು ಅರ್ಜಿ ಸಲ್ಲಿಕೆ ಮಾಡಿದರೆ ಏನು ಉಪಯೋಗ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ
ಪಿಎಂ ಉಜ್ವಲ ಯೋಜನೆಯ ಉಪಯೋಗಗಳು (PM Ujjwala Yojana 2.0 Apply).?
ಉಚಿತ ಗ್ಯಾಸ್ ಸ್ಟವ್ ಮತ್ತು ಸಿಲೆಂಡರ್: ಹೌದು ಸ್ನೇಹಿತರೆ ಪಿಎಂ ಉಜ್ವಲ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಕೆ ಮಾಡಿದಂತಹ ಮಹಿಳೆಯರಿಗೆ ಉಚಿತವಾಗಿ ಒಂದು ಎಲ್ ಪಿ ಜಿ ಗ್ಯಾಸ್ ಸಿಲೆಂಡರ್ ಜೊತೆಗೆ ಅಡಿಗೆ ಮಾಡಲು ಬೇಕಾಗುವ LPG ಗ್ಯಾಸ್ ಸ್ಟವ್ ನೀಡಲಾಗುತ್ತದೆ ಹಾಗಾಗಿ ಆಸಕ್ತಿ ಇರುವವರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು
ರೂ.300 ಸಬ್ಸಿಡಿ ಸಿಗುತ್ತೆ: ಹೌದು ಗೆಳೆಯರೇ ಕೇಂದ್ರ ಸರ್ಕಾರ ಯೋಜನೆ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಕೆ ಮಾಡಿದಂತ ಫಲಾನುಭವಿಗಳಿಗೆ ಹಾಗೂ ಈಗಾಗಲೇ ಅರ್ಜಿ ಸಲ್ಲಿಸುವಂತ ಫಲಾನುಭವಿಗಳಿಗೆ ವರ್ಷಕ್ಕೆ 9 ಬಾರಿ lpg ಗ್ಯಾಸ್ ಸಿಲೆಂಡರ್ ರೀಫಿಲ್ ಮಾಡಲು ಕೇಂದ್ರ ಸರಕಾರ ಪ್ರತಿ ಸಿಲೆಂಡರಿಗೆ ರೂ.300 ಸಬ್ಸಿಡಿ ನೀಡಲಾಗುತ್ತದೆ.
ಇದರಿಂದ ಈ ಯೋಜನೆಯ ಫಲಾನುಭವಿಗಳು ಕೇವಲ 560 ರೂಪಾಯಿಗೆ ಎಲ್ಪಿಜಿ ಗ್ಯಾಸ್ ಸಿಲೆಂಡರ್ ದೊರೆತಂತೆ ಆಗುತ್ತದೆ. ಹೌದು ಸ್ನೇಹಿತರೆ ಪ್ರಸ್ತುತ LPG ಗ್ಯಾಸ್ ಸಿಲೆಂಡರ್ (14.2 KG) ₹879 ರೂಪಾಯಿ ಇದೆ ಇದರಲ್ಲಿ ಕೇಂದ್ರ ಸರ್ಕಾರದಿಂದ 300 ಸಬ್ಸಿಡಿ ಸಿಗುತ್ತೆ
ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (PM Ujjwala Yojana 2.0 Apply).?
- ಅರ್ಜಿ ಸಲ್ಲಿಸಲು ಮಹಿಳೆಯರಿಗೆ ಮಾತ್ರ ಅವಕಾಶ
- ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷ ಮೇಲ್ಪಟ್ಟಿರಬೇಕು
- ಅರ್ಜಿದಾರ ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂಪಾಯಿ ಒಳಗಡೆ ಇರಬೇಕು
- ಅರ್ಜಿದಾರರು ಭಾರತದ ಪ್ರಜೆಯಾಗಿರಬೇಕು ಹಾಗೂ ರಾಜ್ಯ ಅಥವಾ ಕೇಂದ್ರ ಸರ್ಕಾರದಿಂದ ರೇಷನ್ ಕಾರ್ಡ್ ಪಡೆದಿರಬೇಕು
- ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಈ ಹಿಂದೆ ಎಲ್‌ಪಿಜಿ ಗ್ಯಾಸ್ ಸಿಲೆಂಡರ್ ಕನೆಕ್ಷನ್ ಪಡೆದಿರಬಾರದು
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು (PM Ujjwala Yojana 2.0 Apply Documents).?
- ಅರ್ಜಿದಾರ ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ವೋಟರ್ ಐಡಿ
- ಇತ್ತೀಚಿನ ನಾಲ್ಕು ಫೋಟೋಸ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ
- ಮೊಬೈಲ್ ಸಂಖ್ಯೆ
- ಬ್ಯಾಂಕ್ ಪಾಸ್ ಬುಕ್
- ಇತರೆ ಅಗತ್ಯ ದಾಖಲಾತಿಗಳು
ಅರ್ಜಿ ಸಲ್ಲಿಸುವುದು ಹೇಗೆ (PM Ujjwala Yojana 2.0 Apply).?
ಸ್ನೇಹಿತರೆ ಪ್ರಸ್ತುತ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಮತ್ತೆ ಕೇಂದ್ರ ಸರಕಾರ ವತಿಯಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವಂತಹ ಮಹಿಳೆಯರು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗೆ ಭೇಟಿ ನೀಡಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು.
ಅಥವಾ ನಿಮ್ಮ ಹತ್ತಿರದ ಎಲ್ಪಿಜಿ ಗ್ಯಾಸ್ ಸಿಲೆಂಡರ್ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು ಅಥವಾ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಪ್ರತಿದಿನ ಹೊಸ ವಿಷಯಗಳು ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಆಸಕ್ತಿ ಇದೆಯಾ ಹಾಗಾದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಭೇಟಿ ನೀಡಬಹುದು
ಪದವಿ ಪಾಸಾದವರಿಗೆ ರೈಲ್ವೆ ಇಲಾಖೆ ಬಂಪರ್ ಉದ್ಯೋಗ ಅವಕಾಶ, 5,810 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ!