BSF Constable Tradesman Recruitment 2025- ನಮಸ್ಕಾರ ಸ್ನೇಹಿತರೆ ನೀವು ಉದ್ಯೋಗ ಹುಡುಕುತ್ತಿದ್ದರೆ ನಿಮಗೆ ಕೇಂದ್ರ ಸರ್ಕಾರ ಕಡೆಯಿಂದ ಭರ್ಜರಿ ಗುಡ್ (Good News) ನ್ಯೂಸ್ ಹೌದು ಸ್ನೇಹಿತರೆ, ಇದೀಗ ಕೇಂದ್ರ ಸರ್ಕಾರ ಬಾರ್ಡರ್ ಸೆಕ್ಯುರಿಟಿ ಫೋರ್ಸ್ (BSF) ನಲ್ಲಿ ಖಾಲಿ ಇರುವ ವಿವಿಧ 3588 ಹುದ್ದೆಗಳಿಗೆ ಅರ್ಜಿ ಆಹ್ವಾನ (apply online) ಮಾಡಲಾಗಿದೆ.!
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕನಿಷ್ಠ 10ನೇ ತರಗತಿ ಪಾಸ್ (10Th) ಆಗಿದ್ದರೆ ಸಾಕು ಅರ್ಜಿ ಸಲ್ಲಿಕೆ (apply online) ಮಾಡಬಹುದು ಆದ್ದರಿಂದ ನಾವು ಈ ಲೇಖನಿಯಲ್ಲಿ ಹುದ್ದೆಗಳ ನೇಮಕಾತಿ ಹಾಗೂ ಅರ್ಜಿ ಸಲ್ಲಿಸುವ ವಿಧಾನದ ಬಗ್ಗೆ ಮಾಹಿತಿ ತಿಳಿಸಿಕೊಡುತ್ತಿದ್ದೇವೆ ಆದ್ದರಿಂದ ನೀವು ಈ ಲೇಖನಿಯನ್ನು ಕೊನೆವರೆಗೂ ಓದಿ
BSF ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ..?
ಹೌದು ಸ್ನೇಹಿತರೆ, ಬಾರ್ಡರ್ ಸೆಕ್ಯುರಿಟಿ ಫೋರ್ಸ್ (BSF) ದೇಶದ ಗಡಿ ರಕ್ಷಣೆ ಮಾಡುವಲ್ಲಿ ಹೆಚ್ಚು ಕಾರ್ಯ ನಿರ್ವಹಿಸುತ್ತದೆ ಇದೀಗ ಗಡಿರಕ್ಷಣೆ ಮಾಡಲು ಬೇಕಾಗಿರುವ ಅಂತ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.! ಆದ್ದರಿಂದ ನಿಮಗೆ ಸರ್ಕಾರಿ ನೌಕರಿ ಮಾಡಲು ಇಚ್ಛೆ ಇದ್ದರೆ ಈ ಹುದ್ದೆಗಳಿಗೆ ಹಿಂದೆ ಅರ್ಜಿ ಸಲ್ಲಿಸಿ

ಹೌದು ಸ್ನೇಹಿತರೆ, ಇದೀಗ ಸುಮಾರು 3588 ಗಡಿ ಭದ್ರತಾ ಪಡೆ (BSF) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹತ್ತನೇ ತರಗತಿ ಪಾಸಾದವರು ಹಾಗೂ ಐ ಟಿ ಐ ಪಾಸ್ ಆದವರು ಅರ್ಜಿ ಸಲ್ಲಿಕೆ ಮಾಡಲು ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಆಸಕ್ತಿ ಇರುವವರು ಬೇಗ ಅರ್ಜಿ ಸಲ್ಲಿಸಿ
BSF ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ವಿವರ..?
- ನೇಮಕಾತಿ ಸಂಸ್ಥೆ:- ಬಾರ್ಡರ್ ಸೆಕ್ಯುರಿಟಿ ಫೋರ್ಸ್ (BSF)
- ಖಾಲಿ ಹುದ್ದೆಗಳ ಸಂಖ್ಯೆ:- 3,588 ಹುದ್ದೆಗಳು
- ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
- ಅರ್ಜಿ ಪ್ರಾರಂಭ ದಿನಾಂಕ:- 05/08/2025
- ಅರ್ಜಿ ಕೊನೆಯ ದಿನಾಂಕ:- 05/09/2025
- ವಯೋಮಿತಿ ಎಷ್ಟು:- 18-23 ವರ್ಷ
BSF ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು..?
ವಿದ್ಯಾರ್ಹತೆ:- ಸ್ನೇಹಿತರೆ ಗಡಿ ಭದ್ರತಾ ಪಡೆ (BSF) ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ನೀವು ಈ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಬಯಸುತ್ತಿದ್ದರೆ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು ಮತ್ತು ಐ ಟಿ ಐ ಪಾಸ್ ಆದವರು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇದೆ
ವಯೋಮಿತಿ ಎಷ್ಟು:- ಬಿಎಸ್ಎಫ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ 23 ವರ್ಷದ ಒಳಗಿನವರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು ಹಾಗೂ ಸರಕಾರದ ಮೀಸಲಾತಿ ನಿಯಮಗಳ ಅನುಸಾರವಾಗಿ ವಯೋಮಿತಿ ಸಡಿಲಿಕೆ ನೀಡಲಾಗಿದೆ
ಅರ್ಜಿ ಶುಲ್ಕ ಎಷ್ಟು:- ಬಿಎಸ್ಎಫ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಸಾಮಾನ್ಯ ವರ್ಗಕ್ಕೆ ಸೇರಿದರೆ ರೂ.100 ಅರ್ಜಿ ಶುಲ್ಕ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಮಾಜಿ ಸೈನಿಕರಿಗೆ ಮತ್ತು ಮಹಿಳೆಯರಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ ಅಂದರೆ ಸಂಪೂರ್ಣವಾಗಿ ಉಚಿತವಾಗಿ ಅರ್ಜಿ ಸಲ್ಲಿಕೆ ಮಾಡಬಹುದು
ಸಂಬಳ ಎಷ್ಟು:- ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ 3588 ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ₹21,700 ರಿಂದ 69,100/- ವರೆಗೆ ಸಂಬಳ ನೀಡಲಾಗುತ್ತದೆ
ಆಯ್ಕೆಯ ವಿಧಾನ:- ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ದೈಹಿಕ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆಗಳ ಮೂಲಕ ಈ ಒಂದು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
BSF ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರ ಬಿಎಸ್ಎಫ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಮುನ್ನ ಮೊದಲು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ವಿವರ ತಿಳಿದುಕೊಳ್ಳಿ ನಂತರ ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಅರ್ಜಿ ಸಲ್ಲಿಕೆ ಮಾಡಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
- ಮೇಲೆ ಕೊಟ್ಟಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿದ ತಕ್ಷಣ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುತ್ತೇನೆ
- ನಂತರ ಅಲ್ಲಿ ನೀವು ನಿಮ್ಮ ಹೆಸರು ಅಥವಾ ಮೊಬೈಲ್ ನಂಬರ್ ಹಾಗೂ ಈಮೇಲ್ ಐಡಿ ಹಾಕಿ ರಿಜಿಸ್ಟರ್ ಮಾಡಿಕೊಳ್ಳಿ
- ನಂತರ ಈ ಹುದ್ದೆಗಳ ನೇಮಕಾತಿಗೆ ಅಪ್ಲೈ ಫಾರ್ಮ್ ಸಿಗುತ್ತೆ, ಅದರ ಮೇಲೆ ಕ್ಲಿಕ್ ಮಾಡಿ
- ನಂತರ ಅಲ್ಲಿ ನೀವು ನಿಮ್ಮ ಹೆಸರು ಮತ್ತು ವಿಳಾಸ ಹಾಗೂ ಇತರ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ
- ನಂತರ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿ ಮಾಡಿ ಅಪ್ಲೈ ನೌ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ
- ನಂತರ ಅರ್ಜಿ ಸಲ್ಲಿಕೆಯಾದ ನಂತರ ಅರ್ಜಿ ರಿಸಿಪ್ಟ್ ಡೌನ್ಲೋಡ್ ಮಾಡಲು ಕೇಳುತ್ತದೆ ಅದನ್ನು ಡೌನ್ಲೋಡ್ ಮಾಡಿಕೊಳ್ಳಿ
ಈ ರೀತಿ ಅರ್ಜಿ ಸಲ್ಲಿಕೆ ಮಾಡಿದ ನಂತರ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಪ್ರಶ್ನೆ ಪತ್ರಿಕೆಗಳು ಹಾಗೂ ಇತರ ಸಾಮಾನ್ಯ ಜ್ಞಾನದ ಬಗ್ಗೆ ಅಧ್ಯಯನ ಮಾಡಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿ ಈ ಒಂದು ಹುದ್ದೆಗಳಿಗೆ ಆಯ್ಕೆ ಆಗಬಹುದು
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಾಗಿ ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು