Free Sewing Machine Scheme: ಉಚಿತ ಹೊಲಿಗೆ (sewing machine) ಯಂತ್ರ ಪಡೆಯಲು ಅರ್ಜಿ ಆಹ್ವಾನ! ಮಹಿಳೆಯರು ಈ ರೀತಿ ಅರ್ಜಿ ಸಲ್ಲಿಸಿ
ಪ್ರಸಕ್ತ ಸಾಲಿನ ವರ್ಷದಲ್ಲಿ ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುವಂತ ಮಹಿಳೆಯರಿಗೆ ಸುಧಾರಿತ ವಿದ್ಯುತ್ ಚಾಲಿತ ಉಚಿತ ಹೊಲಿಗೆ ಯಂತ್ರ ವಿತರಣೆ ಮಾಡಲಾಗುತ್ತಿದೆ ಹಾಗಾಗಿ ಮಹಿಳೆಯರು ಮತ್ತು ವೃತ್ತಿಪರ ಕುಶಲಕರ್ಮಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹೌದು ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರ ಇದೀಗ ಜಿಲ್ಲಾ ವಲಯದ ಯೋಜನೆಯ ಜಿಲ್ಲಾ ಉದ್ಯಮ ಕೇಂದ್ರ ಯೋಜನೆಯ ಮೂಲಕ ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುವಂತಹ ಮಹಿಳೆಯರಿಗೆ ಹಾಗೂ ವೃತ್ತಿಪರ ಕುಶಲ ಕಾರ್ಮಿಕ ಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಯೋಜನೆಯ ಮೂಲಕ ಹೊಲಿಗೆ ಯಂತ್ರ ನೀಡಲಾಗುತ್ತಿದೆ ಹಾಗಾಗಿ ಆಸಕ್ತಿ ಇರುವವರು ಬೇಗ ಅರ್ಜಿ ಸಲ್ಲಿಸಿ
ಉಚಿತ ಹೊಲಿಗೆ ಯಂತ್ರಕ್ಕೆ ಯಾರು ಅರ್ಜಿ ಸಲ್ಲಿಸಬಹುದು..?
ಪ್ರಸ್ತುತ ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಲು ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುವಂತಹ ಮಹಿಳೆಯರಿಗೆ ಹಾಗೂ ಕ್ಷೌರಿಕ ಕಸುಬುದಾರರಿಗೆ ಮತ್ತು ಬಡಗಿತನ ಮಾಡುವಂತಹ ಜನರಿಗೆ ಉಚಿತ ಉಪಕರಣಗಳನ್ನು ಮತ್ತು ಸಲಕರಣೆಗಳು ಹಾಗೂ ಹೊಲಿಗೆ ಯಂತ್ರ ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ, ಆದ್ದರಿಂದ ಆಸಕ್ತಿ ಇರುವವರು ನಿಮ್ಮ ಜಿಲ್ಲಾ ಪಂಚಾಯಿತಿಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ನೀವು ಅರ್ಜಿ ಸಲ್ಲಿಸಬಹುದು

ಈ ಬಗ್ಗೆ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಉಪ ನಿರ್ದೇಶಕರು ಹೊಸ ಪ್ರಕಟಣೆ ನೀಡಿದ್ದಾರೆ. ಹಾಗಾಗಿ ನೀವು ಉಚಿತ ಹೊಲಿಗೆ ಯಂತ್ರ ಪಡೆಯಲು ಆಸಕ್ತಿ ಇದ್ದರೆ ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕು ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಮಾಹಿತಿಯನ್ನು ತಿಳಿದುಕೊಳ್ಳೋಣ.
ಪ್ರಸ್ತುತ ಈ ಜಿಲ್ಲೆಯವರು ಮಾತ್ರ ಅರ್ಜಿ ಸಲ್ಲಿಸಿ..?
ಹೌದು ಸ್ನೇಹಿತರೆ, ಪ್ರಸ್ತುತ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಪ್ರಕಟಣೆ ಮಾಡಿರುವ ಮಾಹಿತಿಯ ಪ್ರಕಾರ ಯಾದಗಿರಿ ಮತ್ತು ಹಾಸನ ಜಿಲ್ಲೆಯ ಗ್ರಾಮೀಣ ಭಾಗದ ಮಹಿಳೆಯರಿಗೆ ಹಾಗೂ ಕುಶಲ ಕಾರ್ಮಿಕರಿಗೆ ಈ ಸುಧಾರಿತ ಉಚಿತ ವಿದ್ಯುತ್ ಚಾಲಿತವರಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ.
ಯಾದಗಿರಿ ಜಿಲ್ಲೆ:-
- ಅರ್ಜಿ ಪ್ರಾರಂಭ ದಿನಾಂಕ:- 01/07/2025
- ಅರ್ಜಿ ಕೊನೆಯ ದಿನಾಂಕ:- 31/07/2025
ಹಾಸನ ಜಿಲ್ಲೆ:-
- ಅರ್ಜಿ ಪ್ರಾರಂಭ ದಿನಾಂಕ:- 07/0//2025
- ಅರ್ಜಿ ಕೊನೆಯ ದಿನಾಂಕ:- 31/07/2025
ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು..?
- ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 8ನೇ ತರಗತಿ ಪಾಸ್ ಆಗಿರಬೇಕು
- ಉಚಿತ ಹೊಲಿಗೆ ಯಂತ್ರ ಪಡೆಯಲು ಬಯಸುವ ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 45 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ
- ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುತ್ತಿರಬೇಕು ಅಂತವರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ
- ನಗರ ಪ್ರದೇಶದಲ್ಲಿ ಇರುವ ಅಭ್ಯರ್ಥಿಗಳಿಗೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆ ಇರುವುದಿಲ್ಲ
- ಹೊಲಿಗೆ ಯಂತ್ರ ಯೋಜನೆಗೆ ಮಹಿಳೆಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ
ಉಚಿತ ಹೊಲಿಗೆ ಯಂತ್ರ ಪಡೆಯಲು ಬೇಕಾಗುವ ಅಗತ್ಯ ದಾಖಲಾತಿಗಳು..?
- ಅರ್ಜಿದಾರ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಜನ್ಮ ದಿನಾಂಕದ ವಿವರಗಳು (TC)
- ರೇಷನ್ ಕಾರ್ಡ್
- ವೃತ್ತಿ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಪಾಸ್ಪೋರ್ಟ್ ಸೈಜ್ ಫೋಟೋಸ್
- ಇತರೆ ದಾಖಲಾತಿಗಳು
ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ನೀವು ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನಾವು ಕೆಳಗಡೆ ಯಾದಗಿರಿ ಮತ್ತು ಹಾಸನ ಜಿಲ್ಲೆಗಳಿಗೆ ಸಂಬಂಧಿಸಿದ ಅರ್ಜಿ ಲಿಂಕ್ ನೀಡಿದ್ದೇವೆ ಇದನ್ನು ಬಳಸಿಕೊಂಡು ನೀವು ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು
ಯಾದಗಿರಿ ಜಿಲ್ಲೆ:-
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಹಾಸನ ಜಿಲ್ಲೆ:-
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ನಿಮಗೆ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಹೊಸ ಮಾಹಿತಿ ಪಡೆದುಕೊಳ್ಳಲು ಆಸಕ್ತಿ ಇದೆಯಾ ಹಾಗಾದರೆ ನೀವು ತಕ್ಷಣ ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಮ್ ಚಾನೆಲ್ ಗಳಿಗೆ ಭೇಟಿ ನೀಡಿ