HDFC Bank Parivartan Scholarship 2025; – HDFC ವಿದ್ಯಾರ್ಥಿ ವೇತನ (Scholarship) ಯೋಜನೆಗೆ ಅರ್ಜಿ ಸಲ್ಲಿಸಿ ₹75,000/- ವರೆಗೆ ಸ್ಕಾಲರ್ಶಿಪ್ ಪಡೆಯರಿ
ನಮಸ್ಕಾರ ಗೆಳೆಯರೇ ಎಚ್ ಡಿ ಎಫ್ ಸಿ ಬ್ಯಾಂಕ್ ಎಲ್ಲಾ ವಿದ್ಯಾರ್ಥಿಗಳಿಗೆ ಇದೀಗ ಸಿಹಿ ಸುದ್ದಿ ನೀಡಿದೆ.! ಹೌದು ಸ್ನೇಹಿತರೆ HDFC ಫೌಂಡೇಶನ್ ವತಿಯಿಂದ ಎಲ್ಲಾ ವಿದ್ಯಾರ್ಥಿಗಳಿಗೆ ₹75,000/- ವರೆಗೆ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಆಹ್ವಾನ ಮಾಡಲಾಗಿದೆ.!
ಆದ್ದರಿಂದ ನಾವು ಈ ಒಂದು ಲೇಖನ ಮೂಲಕ ಎಚ್ ಡಿ ಎಫ್ ಸಿ ಸ್ಕಾಲರ್ಶಿಪ್ ಯೋಜನೆಗೆ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಬೇಕು ಹಾಗೂ ಅರ್ಜಿ ಸಲ್ಲಿಕೆ ಮಾಡಲು ಬೇಕಾಗುವ ಪ್ರಮುಖ ಲಿಂಕ್ ಮತ್ತು ಎಚ್ ಡಿ ಎಫ್ ಸಿ ವಿದ್ಯಾರ್ಥಿ ವೇತನಕ್ಕೆ ಹೇಗೆ ಅರ್ಜಿ ಸಲ್ಲಿಕೆ ಮಾಡಬೇಕು ಎಂಬ ವಿವರವನ್ನು ಈ ಲೇಖನ ಮೂಲಕ ತಿಳಿಯೋಣ ಹಾಗಾಗಿ ಈ ಲೇಖನವನ್ನು ಆದಷ್ಟು ಕೊನೆವರೆಗೂ ಓದಿ
ಎಚ್ ಡಿ ಎಫ್ ಸಿ ಬ್ಯಾಂಕ್ ಪರಿವರ್ತನಾ(HDFC Bank Parivartan Scholarship 2025) ಸ್ಕಾಲರ್ಶಿಪ್ ಯೋಜನೆ ಅಂದರೆ ಏನು…?
ಹೌದು ಸ್ನೇಹಿತರೆ 2025 ಮತ್ತು 2026 ನೇ ಸಾಲಿನ ಎಚ್ ಡಿ ಎಫ್ ಸಿ ಬ್ಯಾಂಕ್ ಪರಿವರ್ತನ ಸ್ಕಾಲರ್ಶಿಪ್ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ.! ಈ ವಿದ್ಯಾರ್ಥಿ ವೇತನಕ್ಕೆ ಒಂದನೇ ತರಗತಿಯಿಂದ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ವೃತ್ತಿಪರ ಸ್ನಾತಕೋತ್ತರ ಪದವಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ

ಹೌದು ಸ್ನೇಹಿತರೆ ಪ್ರಾಥಮಿಕ (primary) ಹಾಗೂ ಪ್ರೌಢಶಾಲೆ ಮತ್ತು ಪದವಿ ಹಾಗೂ ಪದವಿಪೂರ್ವ (Undergraduate) ಮತ್ತು ಸ್ನಾತಕೋತರ ವಿದ್ಯಾರ್ಥಿಗಳು HDFC ಬ್ಯಾಂಕ್ ಪರಿವರ್ತನಾ (Scholarship) ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಿ ವಿದ್ಯಾರ್ಹತೆಯ ಅನುಗುಣವಾಗಿ ಬರೋಬ್ಬರಿ ₹15,000/- ಯಿಂದ ₹75,000/- ವರೆಗೆ ವಿದ್ಯಾರ್ಥಿ (Scholarship) ವೇತನವನ್ನು ಪಡೆದುಕೊಳ್ಳಲು ಅವಕಾಶವಿರುತ್ತದೆ
ಎಚ್ ಡಿ ಎಫ್ ಸಿ Bank Parivartan ಸ್ಕಾಲರ್ಶಿಪ್ ಯೋಜನೆಗೆ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು…?
ಸ್ನೇಹಿತರೆ ಎಚ್‌ಡಿಎಫ್‍ಸಿ ಬ್ಯಾಂಕ್ ಎಚ್‌ಡಿಎಫ್‍ಸಿ ಫೌಂಡೇಶನ್ ವತಿಯಿಂದ ನೀಡುತ್ತಿರುವ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಎಲ್ಲಾ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಲಾಗಿದೆ..!
ಅಂದರೆ ಒಂದನೇ ತರಗತಿಯಿಂದ 12ನೇ ತರಗತಿಯವರೆಗೆ ಓದುತ್ತಿರುವ ವಿದ್ಯಾರ್ಥಿಗಳು ಹಾಗೂ ಡಿಪ್ಲೋಮೋ ಮತ್ತು ಐಟಿಐ ಹಾಗೂ ಪಾಲಿಟೆಕ್ನಿಕ್ ಮತ್ತು ಅಂಡರ್ ಗ್ರಾಜುಯೇಟ್ ಅಥವಾ ಸಾಮಾನ್ಯ ಮತ್ತು ವೃತ್ತಿಪರ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು..
ಹೆಚ್ ಡಿ ಎಫ್ ಸಿ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಇಂದಿನ ತರಗತಿಯಲ್ಲಿ ಕನಿಷ್ಠ 55% ಅಂಕಗಳೊಂದಿಗೆ ಪಾಸಾಗಿರಬೇಕು ಹಾಗೂ ಕುಟುಂಬದ ವಾರ್ಷಿಕ ಆದಾಯ ₹2,50,000/- ಒಳಗಡೆ ಇರಬೇಕಾಗುತ್ತದೆ ಅಥವಾ ಇದಕ್ಕೆ ಸಮನಾಗಿ ಆದಾಯ ಹೊಂದಿರಬೇಕು
ಹೌದು ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಮೇಲೆ ತಿಳಿಸಿದ ಎಲ್ಲಾ ತರಗತಿಯ ವಿದ್ಯಾರ್ಥಿಗಳು ಹಾಗೂ ವಿವಿಧ ಕೋರ್ಸ್ ಗಳನ್ನು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಪದವಿ ಮತ್ತು ಇತರ ಯಾವುದೇ ವಿಷಯದಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು
ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಭಾರತದ ನಾಗರಿಕರಾಗಿರಬೇಕು ಹಾಗೂ ಭಾರತದ ಪೌರತ್ವ ಹೊಂದಿರಬೇಕು ಮತ್ತು ಎಲ್ಲಾ ವರ್ಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿದೆ ಮತ್ತು ಹೆಚ್ಚಿನ ವಿವರಕ್ಕಾಗಿ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ
ಯಾವ ವಿದ್ಯಾರ್ಥಿಗಳಿಗೆ ಎಷ್ಟು [HDFC Bank Parivartan Scholarship 2025 Amount] ಹಣ ಸಿಗುತ್ತೆ…?
1 ರಿಂದ 6ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ₹15,000/- ಹಣ ಎಚ್ ಡಿ ಎಫ್ ಸಿ ಪರಿವರ್ತನ ಸ್ಕಾಲರ್ಶಿಪ್ ಮೂಲಕ ಪಡೆದುಕೊಳ್ಳಬಹುದು
7 ರಿಂದ 12ನೇ (PUC) ತರಗತಿ, ಅಥವಾ ITI, ಡಿಪ್ಲೋಮೋ (diploma), ಪಾಲಿಟೆಕ್ನಿಕ್ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ₹18,000/- ವರೆಗೆ ಸ್ಕಾಲರ್ಶಿಪ್ ಪಡೆದುಕೊಳ್ಳಬಹುದು
ಸಾಮಾನ್ಯ ಪದವಿ ಪೂರ್ವ ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ₹30,000/- ವರೆಗೆ ಎಚ್‌ಡಿಎಫ್‌ಸಿ ವಿದ್ಯಾರ್ಥಿ ವೇತನದ ಮೂಲಕ ಹಣ ಸಹಾಯ ಪಡೆದುಕೊಳ್ಳಬಹುದು
ವೃತ್ತಿಪರ ಪದವಿಪೂರ್ವ ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ₹50,000/- ವರೆಗೆ ಈ ಒಂದು ವಿದ್ಯಾರ್ಥಿ ವೇತನದ ಮೂಲಕ ಹಣ ಸಹಾಯ ಪಡೆದುಕೊಳ್ಳಬಹುದು
ಸಾಮಾನ್ಯ ಸ್ನಾತಕೋತರ ಕೋರ್ಸ್ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಬರೋಬ್ಬರಿ 35,000 ವರೆಗೆ ವಿದ್ಯಾರ್ಥಿ ವೇತನ ಪಡೆದುಕೊಳ್ಳಲು ಅರ್ಹತೆ ಹೊಂದಿರುತ್ತಾರೆ
ವೃತ್ತಿಪರ ಸ್ನಾತಕೋತ್ತರ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಬರೋಬ್ಬರಿ 75,000 ವರೆಗೆ ವಿದ್ಯಾರ್ಥಿ ವೇತನ ಪಡೆದುಕೊಳ್ಳಲು ಅರ್ಹತೆ ಹೊಂದಿರುತ್ತಾರೆ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (HDFC Bank Parivartan Scholarship 2025 Apply documents).?
- ಹಿಂದಿನ ಎಲ್ಲಾ ತರಗತಿಯ ಅಂಕಪಟ್ಟಿಗಳು
- ಪಾಸ್ ಪೋರ್ಟ್ ಸೈಜ್ ಫೋಟೋಸ್
- ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಶಾಲಾ ಕಾಲೇಜು ಪ್ರವೇಶ ಪತ್ರ
- ಬ್ಯಾಂಕ್ ಪಾಸ್ ಬುಕ್
- ಇತರೆ ಅಗತ್ಯ ದಾಖಲಾತಿಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Apply Last Date for HDFC Bank Parivartan Scholarship 2025).?
ಸ್ನೇಹಿತರೆ ನೀವು ಎಚ್ ಡಿ ಎಫ್ ಸಿ ಬ್ಯಾಂಕ್ ನೀಡುತ್ತಿರುವ ಪರಿವರ್ತನ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31/08/2025
ಅರ್ಜಿ ಸಲ್ಲಿಸುವುದು ಹೇಗೆ (How To Apply online for HDFC Bank Parivartan Scholarship 2025).?
ಎಚ್‌ಡಿಎಫ್‍ಸಿ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನ ಕುರಿತು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಿ ನಂತರ ಕೆಳಗಡೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್ ಲಿಂಕ್:- https://www.hdfcbankecss.com/
ಅರ್ಜಿ ಕೊನೆಯ ದಿನಾಂಕ:- 31/08/2025
ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನದ ಕುರಿತು ಇನ್ನಷ್ಟು ಹೆಚ್ಚಿನ ಮಾಹಿತಿ ಬೇಕಾದರೆ ಮೇಲೆ ಕೊಟ್ಟಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು
ವಾಟ್ಸಾಪ್ ಚಾನಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು
BCC Bank Recruitment 2025 – 10Th ಪಾಸಾದವರಿಗೆ ಬೆಂಗಳೂರು ಸಿಟಿ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಉದ್ಯೋಗ ಅವಕಾಶ..
