PM Kisan 20Th Instalment: ಪಿಎಂ ಕಿಸಾನ್ 20ನೇ ಕಂತು 2000 ಹಣ ಈ ದಿನ ಬಿಡುಗಡೆ! ಅರ್ಹ ರೈತರ ಪಟ್ಟಿ ಬಿಡುಗಡೆ, ಇಲ್ಲಿದೆ ಲಿಂಕ್
ರೈತರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಪ್ರಮುಖ ಯೋಜನೆಗಳಲ್ಲಿ ಒಂದಾದಂತ ಪಿಎಂ ಕಿಸಾನ್ ಸನ್ಮಾನ್ ನಿಧಿ ಯೋಜನೆಯ ಮೂಲಕ ರೈತರಿಗೆ ಬರಬೇಕಾದ 20ನೇ ಕಂತಿನ 2000 ಹಣ ಬಿಡುಗಡೆಯ ದಿನಾಂಕ ಫಿಕ್ಸ್ ಮಾಡಲಾಗಿದೆ ಹಾಗೂ ಅರ್ಹ ರೈತರ ಪಟ್ಟಿ ಬಿಡುಗಡೆ ಮಾಡಲಾಗಿದ್ದು ಈ ಒಂದು ಲೇಖನೆಯ ಮೂಲಕ ನಾವು ಯಾವ ರೀತಿ ಅರ್ಹರ ಪಟ್ಟಿ ವಿವರವನ್ನು ಚೆಕ್ ಮಾಡುವುದು ಹಾಗೂ ಪಿಎಂ ಕಿಸಾನ್ ಸನ್ಮಾನ ನಿಧಿ ಯೋಜನೆಯ 2000 ಹಣ ಯಾವಾಗ ಬಿಡುಗಡೆಯಾಗುತ್ತದೆ ಎಂಬ ಮಾಹಿತಿ ತಿಳಿದುಕೊಳ್ಳೋಣ
ಪಿಎಂ ಕಿಸಾನ್ ಯೋಜನೆ..?
ಕೇಂದ್ರ ಸರ್ಕಾರ ರೈತರ ಅಭಿವೃದ್ಧಿಗಾಗಿ ಹಾಗೂ ರೈತರ ಆದಾಯವನ್ನು ದ್ವಿಗುಣಗೊಳಿಸುವ ಉದ್ದೇಶದಿಂದ ಪಿಎಂ ಕಿಸಾನ್ ಯೋಜನೆಯನ್ನು ಜಾರಿಗೆ ತಂದಿದೆ ಈ ಯೋಜನೆ ಮೂಲಕ ಅರ್ಜಿ ಹಾಕಿದಂತ ರೈತರ ಖಾತೆಗೆ ನೇರವಾಗಿ ವಾರ್ಷಿಕ 6,000 ಹಣವನ್ನು ಮೂರು ಕಂತಿನ ರೂಪದಲ್ಲಿ ವರ್ಗಾವಣೆ ಮಾಡಲಾಗುತ್ತಿದೆ.! ಹೌದು ಸ್ನೇಹಿತರೆ ಇಲ್ಲಿವರೆಗೂ ರೈತರು ಈ ಯೋಜನೆಯ ಮೂಲಕ 19 ಕಂತಿನ ಹಣ ಪಡೆದುಕೊಂಡಿದ್ದಾರೆ ಹಾಗೂ 20ನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದಾರೆ.

ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಅರ್ಹ ರೈತರ ಖಾತೆಗೆ ಪ್ರತಿ ನಾಲ್ಕು ತಿಂಗಳಿಗೊಮ್ಮೆ ಅಥವಾ ವರ್ಷಕ್ಕೆ ₹6,000 ರೂಪಾಯಿ ಹಣವನ್ನು ಈ ಒಂದು ಯೋಜನೆಯ ಮೂಲಕ ರೈತರ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತಿದೆ ಇದೀಗ 20ನೇ ಕಂತಿನ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಹೊಸ ಅಪ್ಡೇಟ್ ಹಾಗಾಗಿ ಈ ಹಣ ಬಿಡುಗಡೆಗೆ ಸಂಬಂಧಿಸಿದ ಮಾಹಿತಿಯನ್ನು ಈಗ ತಿಳಿದುಕೊಳ್ಳೋಣ
ಪಿಎಂ ಕಿಸಾನ್ ಸನ್ಮಾನ್ ನಿಧಿ ಯೋಜನೆಯ 20ನೇ ಕಂತಿನ ಹಣ ಯಾವಾಗ ಬಿಡುಗಡೆ..?
ಹೌದು ಸ್ನೇಹಿತರೆ ಪಿಎಂ ಕಿಸಾನ್ ಸನ್ಮಾನ ನಿಧಿ ಯೋಜನೆಯ 20ನೇ ಕಂತಿನ ಹಣ ಬಿಡುಗಡೆಗೆ ಸಂಬಂಧಿಸಿದಂತೆ ನಮ್ಮ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ನರೇಂದ್ರ ಮೋದಿ ಅವರು ಬಿಹಾರದಲ್ಲಿ ನಡೆದ ಕಾರ್ಯಕ್ರಮದ ಭಾಷಣದಲ್ಲಿ ಪಿಎಂ ಕಿಸಾನ್ 20ನೇ ಕಂತಿನ ಹಣವನ್ನು ಜುಲೈ 18 2025 ರಂದು ಅರ್ಹ ರೈತರ ಖಾತೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ ಈ ಬಗ್ಗೆ ಕೆಲ ಸುದ್ದಿ ಮಾಧ್ಯಮಗಳು ವರದಿ ಮಾಡಿದೆ
ಪಿಎಂ ಕಿಸಾನ್ 2000 ಹಣ ಪಡೆಯಲು ಕಡ್ಡಾಯವಾಗಿ ರೈತರು ಈ ಕೆಲಸ ಮಾಡಿ..?
- ಪಿಎಂ ಕಿಸಾನ್ ಅರ್ಜಿ e-kyc ಪೂರ್ಣಗೊಳಿಸಿ
- ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ
- ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ NPCI ಮ್ಯಾಪಿಂಗ್ ಹಾಗೂ e-kyc ಪ್ರಕ್ರಿಯೆ ಪೂರ್ಣಗೊಳಿಸಿ
- ಅರ್ಜಿಯಲ್ಲಿ ಯಾವುದೇ ತಪ್ಪು ವಿವರಗಳಿದ್ದರೆ ಸರಿಪಡಿಸಿ
ನಿಮಗೆ ಇಲ್ಲಿವರೆಗೂ ಎರಡು ಅಥವಾ ಮೂರು ಕಂತಿನ ಹಣ ಬಾಕಿ ಇದ್ದರೆ ಕೂಡಲೇ ನಿಮ್ಮ ಹತ್ತಿರದ ಕೃಷಿ ಕೇಂದ್ರಗಳಿಗೆ ಅಥವಾ ಕೃಷಿ ಇಲಾಖೆಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಿ
ಪಿಎಂ ಕಿಸಾನ್ 20ನೇ ಕಂತಿನ ಅರ್ಹ ರೈತರ ಪಟ್ಟಿ ಚೆಕ್ ಮಾಡುವುದು ಹೇಗೆ..?
ಪಿಎಂ ಕಿಸಾನ್ 20ನೇ ಕಂತಿನ ಅರ್ಹ ರೈತರ ಪಟ್ಟಿ ಚೆಕ್ ಮಾಡಲು ಅರ್ಜಿದಾರರು ಮೊದಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು ಇದಕ್ಕೆ ಸಂಬಂಧಿಸಿದ ಲಿಂಕ್ ನಾವು ಕೆಳಗಡೆ ನೀಡಿದ್ದೇವೆ
ಅರ್ಹ ರೈತರ ಪಟ್ಟಿ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
- ಮೇಲೆ ಕೊಟ್ಟಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿದ ತಕ್ಷಣ ರೈತರು ಪಿಎಂ ಕಿಸಾನ್ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತಿರಿ
- ನಂತರ ಅಲ್ಲಿ ಬೆನಿಫಿಷಿಯರಿ ಲಿಸ್ಟ್ (beneficiary list) ಎಂಬ ಆಯ್ಕೆ ಕಾಣುತ್ತದೆ ಅದರ ಮೇಲೆ ನೀವು ಕ್ಲಿಕ್ ಮಾಡಿ
- ನಂತರ ನಿಮ್ಮ ರಾಜ್ಯ ಮತ್ತು ಜಿಲ್ಲೆ ಹಾಗೂ ತಾಲೂಕು ಮತ್ತು ನಿಮ್ಮ ಗ್ರಾಮ ಪಂಚಾಯಿತಿ ಅಥವಾ ಗ್ರಾಮ ಆಯ್ಕೆ ಮಾಡಿಕೊಳ್ಳಿ
- ನಂತರ ಅಲ್ಲಿ ನಿಮ್ಮ ಹೆಸರು ಇದೆಯಾ ಇಲ್ಲ ಎಂಬ ಮಾಹಿತಿಯನ್ನು ಉತ್ತರಿಸಿ
ಯಾವುದೇ ಸಮಸ್ಯೆ ಕಂಡು ಬಂದಲ್ಲಿ ನೀವು ಕೆಳಗಡೆ ಕೊಟ್ಟಿರುವ ದೂರವಾಣಿ ಸಂಖ್ಯೆಗೆ ಕರೆ ಮಾಡಿ
ಪಿಎಂ ಕಿಸಾನ್ ಹೆಲ್ಪ್ಲೈನ್ ನಂಬರ್:-
155261/
1800115526
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದಲ್ಲಿ ಆದಷ್ಟು ಈ ಲೇಖನಿಯನ್ನು ರೈತರಿಗೆ ಶೇರ್ ಮಾಡಿ ಹಾಗೂ ಇದೇ ರೀತಿ ಉಪಯುಕ್ತ ಮಾಹಿತಿಗಾಗಿ ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನಲ್ ಗಳಿಗೆ ನೀವು ಸೇರಿಕೊಳ್ಳಬಹುದು