Railway recruitment: ನಮಸ್ಕಾರ ಸ್ನೇಹಿತರೆ, ಕರ್ನಾಟಕ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಭಾರತದ ದಕ್ಷಿಣ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ನೇಮಕಾತಿ ಪ್ರಾರಂಭವಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಹತ್ತನೇ ತರಗತಿ ಅಥವಾ ದ್ವಿತೀಯ ಪಿಯುಸಿ ಅಥವಾ ಪದವಿ ಪಾಸಾದರೆ ಸಾಕು ಇವುಗಳಲ್ಲಿ ಯಾವುದಾದರೂ ಒಂದು ಅರ್ಹತೆ ಹೊಂದಿದ್ದರೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಲೇಖನಿಯಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಳ್ಳೋಣ
ಸ್ನೇಹಿತರೆ ಇದೇ ರೀತಿ ಸರ್ಕಾರಿ ನೌಕರಿ ಹಾಗೂ ಸರ್ಕಾರಿ ಯೋಜನೆಗಳು ಹಾಗೂ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಜಾರಿಗೆ ತರುವಂತ ವಿವಿಧ ರೀತಿ ಸ್ಕಾಲರ್ಶಿಪ್ ಯೋಜನೆಗಳು ಮತ್ತು ನಮ್ಮ ಕರ್ನಾಟಕದ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
39,481 ಕಾನ್ಸ್ ಟೇಬಲ್ ನೇಮಕಾತಿ..! 10Th ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಇಲ್ಲಿನ ಮಾಹಿತಿ
ದಕ್ಷಿಣ ರೈಲ್ವೆ ಇಲಾಖೆ ನೇಮಕಾತಿ (Railway recruitment)..?
ಹೌದು ಸ್ನೇಹಿತರೆ ದಕ್ಷಿಣ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತೆ ಹುದ್ದೆಗಳ ನೇಮಕಾತಿ ಪ್ರಾರಂಭವಾಗಿದ್ದು ಈ ಹುದ್ದೆಗಳಿಗೆ ಕ್ರೀಡಾಕೂಟದಿಂದ ಸುಮಾರು 67 ಹುದ್ದೆಗಳ ಭರ್ತಿ ಮಾಡಲು ರೈಲ್ವೆ ಇಲಾಖೆ ಮುಂದಾಗಿದೆ ಹಾಗಾಗಿ ನೀವೇನಾದರೂ ಚೆಸ್, ವೈಟ್ ಲಿಫ್ಟಿಂಗ್, ಓಟ, ಬಾಸ್ಕೆಟ್ ಬಾಲ್, ಕ್ರಿಕೆಟ್, ಬಾಕ್ಸಿಂಗ್, ಇತ್ಯಾದಿ ಯಾವ ಕ್ರೀಡೆಗಳಲ್ಲಾದರೂ ಭಾಗವಹಿಸಿದ್ದರೆ ಹಾಗೂ ಈ ಕ್ರೀಡಾಕೂಟದಿಂದ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಹಾಗಾಗಿ ಈ ಒಂದು ಲೇಖನಿಯಲ್ಲಿ ಹೇಗೆ ಅರ್ಜಿ ಸಲ್ಲಿಸುವುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿಗಳನ್ನು ಹಾಗೂ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಎಷ್ಟು ಉದ್ದಗಳು ಖಾಲಿ ಇವೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಆದ್ದರಿಂದ ಈ ಲೇಖನವನ್ನು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ
ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು (Railway recruitment)..?
- ನೇಮಕಾತಿ ಪ್ರಾಧಿಕಾರ: ದಕ್ಷಿಣ ರೈಲ್ವೆ ಇಲಾಖೆ
- ಒಟ್ಟು ಹುದ್ದೆಗಳು:- 67
- ಶೈಕ್ಷಣಿಕ ಅರ್ಹತೆ:- SSLC, PUC, ಪದವಿ
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- ಅಕ್ಟೋಬರ್ 6 2024
- ಸಂಬಳ:- ₹18,000 ರಿಂದ ₹29,200
ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವಂತ ಅರ್ಹತೆಗಳು ಮತ್ತು ಇತರ ವಿವರಗಳು (Railway recruitment)..?
ಖಾಲಿ ಹುದ್ದೆಗಳ ವಿವರ:- ಸ್ನೇಹಿತರ ದಕ್ಷಿಣ ರೈಲ್ವೆ ಇಲಾಖೆಯಲ್ಲಿ ಒಟ್ಟು 67 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಇದರಲ್ಲಿ
- ವರ್ಗ:- 1 ರಲ್ಲಿ 46 ಹುದ್ದೆಗಳು ಖಾಲಿ ಇವೆ
- ವರ್ಗ :- 2,3, ರಲ್ಲಿ 16 ಹುದ್ದೆಗಳು ಖಾಲಿ ಇವೆ.
- ವರ್ಗ :- 4,5, ರಲ್ಲಿ 5 ಹುದ್ದೆಗಳು ಖಾಲಿ ಇವೆ
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ದಕ್ಷಿಣ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಕನಿಷ್ಠ ಅಂದರು ಎಸ್ ಎಸ್ ಎಲ್ ಸಿ ಪಾಸ್ ಆಗಿರಬೇಕು ಹಾಗೂ ಗರಿಷ್ಠ ಅಂದರೆ ಪದವಿ ಮುಗಿಸಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ವಯೋಮಿತಿ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಕನಿಷ್ಠ ಅಂದರೆ 18 ವರ್ಷದವರು ಹಾಗೂ ಗರಿಷ್ಠ ಎಂದರೆ 25 ವರ್ಷದ ಒಳಗಿನ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಮೀಸಲಾತಿ ಆಧಾರದ ಮೇಲೆ ವಯಮಿತಿ ಸಡಲಿಕ್ಕೆ ಇದೆ
ಅರ್ಜಿ ಶುಲ್ಕ:- ಸ್ನೇಹಿತರ ದಕ್ಷಿಣ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಸಾಮಾನ್ಯ ವರ್ಗ ಹಾಗೂ OBS, & EWS, ವರ್ಗದ ಅಭ್ಯರ್ಥಿಗಳು 500 ರೂಪಾಯಿ ಅರ್ಜಿ ಸಲ್ಲಿಕೆ ಶುಲ್ಕ ನಿಗದಿ ಮಾಡಿದ್ದು ಮತ್ತು ಇತರ ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡ ಹಾಗೂ PWD, ಮಾಜಿ ಸೈನಿಕರು, ಮತ್ತು ಮಹಿಳೆಯರಿಗೆ 250 ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ
ಸಂಬಳದ ವಿವರ:- ಸ್ನೇಹಿತರ ದಕ್ಷಿಣ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತೆ ಹುದ್ದೆಗಳಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಅರ್ಹತೆಗಳ ಮೇರೆಗೆ ಸಂಬಳ ನೀಡಲಾಗುತ್ತದೆ ಈ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ 18 ಸಾವಿರ ರೂಪಾಯಿಯಿಂದ 29 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ
ಆಯ್ಕೆಯ ವಿಧಾನ:- ಸ್ನೇಹಿತರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅರ್ಜಿದಾರರನ್ನು ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ ಮಾಡಲಾಗುತ್ತದೆ ಮತ್ತು ದೈಹಿಕ ಪರೀಕ್ಷೆ ಮಾತ್ರ ಇರುತ್ತದೆ ಹಾಗೂ ಅರ್ಹತೆ ಹೊಂದಿದ ಅಥೆಲೆಟ್ಸ್ ಗಳನ್ನು ಒಟ್ಟು ನಾಲ್ಕು ಹಂತಗಳಲ್ಲಿ ಆಯ್ಕೆ ಮಾಡಲಾಗುತ್ತದೆ ಮೊದಲನೆಯದಾಗಿ ಕ್ರೀಡ ವಿಚಾರಣೆ, ದೈಹಿಕ ಸಾಮರ್ಥ್ಯ ಪರೀಕ್ಷೆಗಳು, ಮತ್ತು ದಾಖಲಾತಿ ಪರೀಕ್ಷೆಗಳು ಹಾಗೂ ಅಂತಿಮವಾಗಿ ವೈದ್ಯಕೀಯ ಪರೀಕ್ಷೆ ನಡೆಸುವುದರ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು (Railway recruitment)..?
ಅರ್ಜಿ ಪ್ರಾರಂಭ ದಿನಾಂಕ:- 07/09/2024
ಅರ್ಜಿ ಕೊನೆಯ ದಿನಾಂಕ:- 06/10/2024
ಅರ್ಜಿ ಸಲ್ಲಿಸುವುದು ಹೇಗೆ (Railway recruitment)..?
ಸ್ನೇಹಿತರೆ ಈ ಒಂದು ಹುದ್ಧಗಳಿಗೆ ಅರ್ಜಿ ಸಲ್ಲಿಸಲು ನೀವು ರೈಲ್ವೆ ಇಲಾಖೆ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅಥವಾ ನಾವು ಅರ್ಜಿ ಸಲ್ಲಿಸಲು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಅದರ ಮೂಲಕ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರ ಮೇಲೆ ಕೊಟ್ಟಿರುವಂಥ ಲಿಂಕಿನ ಮೇಲೆ ಕ್ಲಿಕ್ ಮಾಡಿ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಯಾವುದಾದರೂ ಆನ್ಲೈನ ಸೆಂಟರ್ ಈ ದಕ್ಷಿಣ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಾಗಿ Telegram WhatsApp ಗ್ರೂಪ್ಗಳಿಗೆ ಜಾಯಿನ್ ಆಗಬಹುದು