ಮಳೆ ಹವಾಮಾನ ಮುನ್ಸೂಚನೆ: ರಾಜ್ಯದ 20 ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ
ನಮಸ್ಕಾರ ಗೆಳೆಯರೇ ಇದೀಗ ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ ಹೆಚ್ಚಾಗಲಿದೆ, ಹೌದು ಗೆಳೆಯರೇ ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಹೊಸ ಮುನ್ಸೂಚನೆ ನೀಡಿದ್ದು, ಈ ಮಳೆ ಮುನ್ಸೂಚನೆಯ ಪ್ರಕಾರ ಮುಂದಿನ ಐದು ದಿನಗಳ ಕಾಲ ಮಳೆಯ ಅಬ್ಬರ ಮುಂದುವರೆಯಲಿದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.
ಹೌದು ಗೆಳೆಯರೆ ಇಂದಿನಿಂದ ಅಂದರೆ ಭಾನುವಾರದಿಂದ ರಾಜ್ಯದ 20 ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಈ 20 ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ..?
ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದ ಪ್ರಕಾರ ನಮ್ಮ ರಾಜ್ಯದ ಕರಾವಳಿ ಪ್ರದೇಶದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಂಗಳೂರು ದಕ್ಷಿಣ, ಚಾಮರಾಜನಗರ, ಮಂಡ್ಯ ಮತ್ತು ಮೈಸೂರು, ಹಾಸನ, ಕೊಡಗು, ಚಿಕ್ಕಮಂಗಳೂರು, ಶಿವಮೊಗ್ಗ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ದಾವಣಗೆರೆ, ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ

ಇದರ ಜೊತೆಗೆ ಉತ್ತರ ಒಳನಾಡಿನ ಜಿಲ್ಲೆಗಳಾದ ವಿಜಯನಗರ, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ,
ಇಷ್ಟೇ ಅಲ್ಲದೆ ಚಿತ್ರದುರ್ಗ ಮತ್ತು ದಾವಣಗೆರೆ, ಬಳ್ಳಾರಿ, ಯಾದಗಿರಿ, ಕಲಬುರ್ಗಿ, ರಾಯಚೂರು, ವಿಜಯಪುರ, ಬೆಳಗಾವಿ, ಬೀದರ್, ಬಾಗಲಕೋಟೆ, ಬಳ್ಳಾರಿ, ವಿಜಯನಗರ ಈ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ತಿಳಿಸಿದೆ
ಸ್ನೇಹಿತರೆ ಇದೇ ರೀತಿ ಪ್ರತಿದಿನ ಹೊಸ ಮಾಹಿತಿ ಪಡೆಯಲು ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಇನ್ನಷ್ಟು ವಿವರ ಪಡೆಯಲು
ನೀವು ತಕ್ಷಣ ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು
PM Kisan 21Th installment – ಪಿಎಂ ಕಿಸಾನ್ 21ನೇ ಕಂತಿನ ಹಣ ಯಾವಾಗ ಬಿಡುಗಡೆ! ಇಲ್ಲಿದೆ ಮಾಹಿತಿ