Rainfall in Karnataka – ರಾಜ್ಯದಾದ್ಯಂತ ಮತ್ತೆ ಭಾರಿ ಮಳೆ ಮುನ್ಸೂಚನೆ.! ಯಾವ ಜಿಲ್ಲೆಯಲ್ಲಿ ಎಷ್ಟು ಮಳೆ, ಇಲ್ಲಿದೆ ವಿವರ
ನಮಸ್ಕಾರ ಸ್ನೇಹಿತರೆ, ಕರ್ನಾಟಕ ರಾಜ್ಯದಾದ್ಯಂತ ಮತ್ತೆ ಮುಂಗಾರು ಮಳೆ ಅಬ್ಬರ ಜೋರಾಗಲಿದೆ ಈ ಎಲ್ಲಾ ಲಕ್ಷಣಗಳು ಕಾಣುತ್ತಿವೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.! ಹೌದು ಸ್ನೇಹಿತರೆ, ಕಳೆದ ಎರಡು ಮೂರು ದಿನಗಳಿಂದ ಕರಾವಳಿ ಭಾಗದಲ್ಲಿ ತಾತ್ಕಾಲಿಕ ಮಳೆ ವಿರಾಮ ನೀಡಿತ್ತು ಮತ್ತು ಮಲೆನಾಡು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ, ಸ್ವಲ್ಪ ವಿರಾಮ ನೀಡಿತ್ತು. ಆದರೆ ಇದೀಗ ಮತ್ತೆ ಇಂದು ಅಂದರೆ ಸೆಪ್ಟೆಂಬರ್ 23 ರಿಂದ ಮತ್ತೆ ಮಳೆಯ ಅಬ್ಬರ ಜೋರಾಗಲಿದೆ ಹಾಗಾಗಿ ಯಾವ ಜಿಲ್ಲೆಯಲ್ಲಿ ಎಷ್ಟು ಮಳೆಯಾಗುತ್ತೆ ಎಂಬ ಮಾಹಿತಿ ತಿಳಿದುಕೊಳ್ಳೋಣ
ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ (Rainfall in Karnataka).?
ಹೌದು ಸ್ನೇಹಿತರೆ, ಕರ್ನಾಟಕ ರಾಜ್ಯದಾದ್ಯಂತ ಅಬ್ಬರ ಸ್ವಲ್ಪ ಕಡಿಮೆಯಾದಂತೆ ಕಾಣುತ್ತಿದೆ ಮತ್ತು ಕೆಲ ಜಿಲ್ಲೆಗಳಲ್ಲಿ ತಾತ್ಕಾಲಿಕವಾಗಿ ಮಳೆಯ ವಿರಾಮ ನೀಡಿದೆ ಎಂದು ಕಾಣುತ್ತಿದೆ ಆದರೆ ಇದರ ನಡುವೆ ಭಾರತೀಯ ಹವಮಾನ ಇಲಾಖೆ (IMD) ಹೊಸ ರಿಪೋರ್ಟ್ ನೀಡಿದ್ದು ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗಗಳು ಸೇರಿದಂತೆ, ರಾಜ್ಯದಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ ಹಾಗಾಗಿ ಯಾವ ಜಿಲ್ಲೆಗಳಲ್ಲಿ ಮಳೆಯಾಗುತ್ತೆ ಎಂಬ ಮಾಹಿತಿಯನ್ನು ಈಗ ತಿಳಿದುಕೊಳ್ಳೋಣ

ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ (Rainfall in Karnataka).?
ಹೌದು ಸ್ನೇಹಿತರೆ, ಇಂದಿನಿಂದ ಅಂದರೆ ಸೆಪ್ಟೆಂಬರ್ 23 ರಿಂದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ನೀಡಲಾಗಿದೆ.! ಹೌದು ಸ್ನೇಹಿತರೆ ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 27 ರಿಂದ ಮತ್ತೆ ಮಳೆ ಪ್ರಾರಂಭವಾಗಲಿದೆ ಎಂದು ಭಾರತೀಯ ಅವಮಾನ ಇಲಾಖೆ ಈ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಿದೆ
ಇದರ ಜೊತೆಗೆ ಭಾರತೀಯ ಹವಮಾನ ಇಲಾಖೆ (IMD) ಮಾಹಿತಿ ನೀಡಿರುವ ಪ್ರಕಾರ ಉತ್ತರ ಕರ್ನಾಟಕದ ಬಾಗಲಕೋಟೆ, ಯಾದಗಿರಿ, ಕಲಬುರಗಿ, ಬೀದರ್, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಸಾಧಾರಣ ಮಳೆಯಿಂದ ಹಾಗೂ ಭಾರಿ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇದರ ಜೊತೆಗೆ ಸೆಪ್ಟೆಂಬರ್ 27 ರಿಂದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆ, ಚಿಕ್ಕಮಂಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮತ್ತೆ ಮಳೆ ಆರ್ಭಟ ಜೋರಾಗಲಿದೆ ಎಂದು ಮಾಹಿತಿ ತಿಳಿಸಿದೆ ಮತ್ತು ಈ ಮೂರು ದಿನಗಳಲ್ಲಿ ಗರಿಷ್ಠ 115 ಮೀಟರ್ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ ಹಾಗೂ ಈ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ
ಅದೇ ರೀತಿ ನಮ್ಮ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಸೆಪ್ಟೆಂಬರ್ 26ರ ವರೆಗೆ ಇದೇ ರೀತಿ ಸಾಧಾರಣವಾದ ವಾತಾವರಣ ಹಾಗೂ ಮೋಡಕವಿದ ವಾತಾವರಣ ಕಂಡುಬರುತ್ತದೆ ಮತ್ತು ಸಾಮಾನ್ಯವಾಗಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಮತ್ತು ಕೆಲ ಭಾಗಗಳಲ್ಲಿ ತುಂತುರು ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ ಬೆಂಗಳೂರಿನ ನಗರದ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಇಲಾಖೆ ಮಾಹಿತಿ ತಿಳಿಸಿದೆ
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನವನ್ನು ಶೇರ್ ಮಾಡಿ ಮತ್ತು ಪ್ರತಿದಿನ ಮಾಹಿತಿಗಾಗಿ
ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು
Hostel Warden Recruitment 2025 – ಹಾಸ್ಟೆಲ್ ವಾರ್ಡನ್ ನೇಮಕಾತಿ 2025 ಬೇಗ ಅರ್ಜಿ ಸಲ್ಲಿಸಿ