Ration Card Apply Online – ಹೊಸ ರೇಷನ್ ಕಾರ್ಡ್ ಅರ್ಜಿ ಈ ದಿನ ಪ್ರಾರಂಭ.! ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕೊನೆಯ ದಿನಾಂಕ ಯಾವಾಗ
ನಮಸ್ಕಾರ ಗೆಳೆಯರೇ ಒಂದು ಲೇಖನಯ ಮೂಲಕ ಹೊಸ ಪಡಿತರ ಚೀಟಿ ಅರ್ಜಿ ಯಾವಾಗ ಪ್ರಾರಂಭವಾಗುತ್ತದೆ ಹಾಗೂ ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡಲು ಕೊನೆಯ ದಿನಾಂಕ ಯಾವಾಗ ಹಾಗೂ ತಿದ್ದುಪಡಿ ಮಾಡಲು ಬೇಕಾಗುವ ದಾಖಲಾತಿಗಳು ಯಾವ್ಯಾವು ಮತ್ತು ತಿದ್ದುಪಡಿ ಮಾಡಲು ಬೇಕಾಗುವ ಪ್ರಮುಖ ಲಿಂಕ್ ಮುಂತಾದ ಮಾಹಿತಿಯ ಬಗ್ಗೆ ಈ ಒಂದು ಲೇಖನಯ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಲೇಖನವನ್ನು ಆದಷ್ಟು ಕೊನೆವರೆಗೂ ಓದಿ..
ಹೊಸ ರೇಷನ್ ಕಾರ್ಡ್ ಅರ್ಜಿ ಯಾವಾಗ ಪ್ರಾರಂಭ..?
ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಇದೀಗ ಅನರ್ಹ ಬಿಪಿಎಲ್ ರೇಷನ್ ಕಾರ್ಡ್ ಗಳ ಪತ್ತೆ ಹಚ್ಚುವ ಕಾರ್ಯ ಬರದಿಂದ ಸಾಗುತ್ತಿದೆ ರಾಜ್ಯ ಸರ್ಕಾರ ನೀಡಿರುವ ಮಾಹಿತಿಯ ಪ್ರಕಾರ ಸುಮಾರು ಹದಿಮೂರು ಲಕ್ಷಕ್ಕಿಂತ ಹೆಚ್ಚು ರೇಷನ್ ಕಾರ್ಡ್ ಗಳನ್ನು ಈಗಾಗಲೇ ಪತ್ತೆಹಚ್ಚಲಾಗಿದ್ದು ಶೀಘ್ರದಲ್ಲೇ ಇಂತ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತದೆ ಎಂದು ಮಾಹಿತಿ ತಿಳಿಸಿದೆ.

ಅದೇ ರೀತಿ ನಮ್ಮ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಎಚ್ ಮುನಿಯಪ್ಪನವರು ಮಾಹಿತಿ ತಿಳಿಸಿರುವ ಪ್ರಕಾರ ಅನರ್ಹ ರೇಷನ್ ಕಾರ್ಡ್ ಗಳ ಪತ್ತೆ ಹಚ್ಚುವಿಕೆ ಕಾರ್ಯವನ್ನು ನ್ಯಾಯಬೆಲೆ ಅಂಗಡಿಗಳಿಗೆ ವಹಿಸಲಾಗಿದೆ.! ಪ್ರತಿಯೊಂದು ನ್ಯಾಯಬೆಲೆ ಅಂಗಡಿ ಕನಿಷ್ಠ 10 ರೇಷನ್ ಕಾರ್ಡ್ ಗಳನ್ನು ಅನರ್ಹ ಹಾಗೂ ಸುಳ್ಳು ದಾಖಲಾತಿಗಳನ್ನು ನೀಡಿ ಮತ್ತು ವಾರ್ಷಿಕ ಆದಾಯ ಹೆಚ್ಚು ಹೊಂದಿರುವ ಕುಟುಂಬಗಳನ್ನು ಗುರುತಿಸಿ ಪತ್ತೆ ಹಚ್ಚಬೇಕು ಎಂದು ಮಾಹಿತಿ ತಿಳಿಸಿದ್ದಾರೆ.
ಅದೇ ರೀತಿ ರೇಷನ್ ಕಾರ್ಡ್ಗಳ ರದ್ದತಿ ಪ್ರಕ್ರಿಯೆ ಪೂರ್ಣ ಗಂಡ ನಂತರ ಅಂದರೆ ಮುಂದಿನ ತಿಂಗಳು ಅಕ್ಟೋಬರ್ ಎರಡನೇ ತಾರೀಖಿನಿಂದ ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆಯ ಪ್ರಕ್ರಿಯೆ ಹಾಗೂ ಹೊಸ ರೇಷನ್ ಕಾರ್ಡ್ ವಿತರಣೆ ಪ್ರಕ್ರಿಯೆ ಪ್ರಾರಂಭ ಮಾಡಲಾಗುತ್ತದೆ ಎಂದು ಕೆ ಹೆಚ್ ಮುನಿಯಪ್ಪನವರು ಮಾಹಿತಿ ತಿಳಿಸಿದ್ದಾರೆ..
ಹೌದು ಸ್ನೇಹಿತರೆ ಅರ್ಹ ಕುಟುಂಬಗಳಿಗೆ ಕೇವಲ 24 ಗಂಟೆಗಳ ಒಳಗಡೆ ಬಿಪಿಎಲ್ ಕಾರ್ಡ್ ದೊರೆಯುವಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೆಎಚ್ ಮುನಿಯಪ್ಪನವರು ಮಾಹಿತಿ ತಿಳಿಸಿದ್ದಾರೆ ಹಾಗಾಗಿ ಹೊಸ ಪಡಿತರ ಚೀಟಿ ಪಡೆಯಲು ಆಸೆ ಇರುವವರು ಅಲ್ಲಿವರೆಗೂ ಕಾಯಬೇಕಾಗುತ್ತದೆ
ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕೊನೆಯ ದಿನಾಂಕ ಯಾವಾಗ..?
ಸ್ನೇಹಿತರೆ ಚೀಟಿ ಅಥವಾ ರೇಷನ್ ಕಾರ್ಡ್ ನಲ್ಲಿ ಹೊಸ ಸದಸ್ಯರನ್ನು ಸೇರ್ಪಡೆ ಮಾಡಲು ಬಯಸುವವರು ಹಾಗೂ ರೇಷನ್ ಕಾರ್ಡ್ ನಲ್ಲಿ ಇತರ ಯಾವುದೇ ಬದಲಾವಣೆ ಮಾಡಲು ಬಯಸುವವರಿಗೆ ಇದೀಗ ರಾಜ್ಯ ಸರ್ಕಾರ ಮತ್ತೆ ಸುದೀರ್ಘವಾಗಿ ಅವಕಾಶ ಮಾಡಿಕೊಟ್ಟಿದೆ..
ಹೌದು ಗೆಳೆಯರೆ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಲು ದಿನಾಂಕ 30 ಸೆಪ್ಟೆಂಬರ್ 2025 ರವರೆಗೆ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಡಲಾಗಿದ್ದು ಆಸಕ್ತಿ ಇರುವವರು ಬೇಗ ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ತಿದ್ದುಪಡಿ ಮಾಡಬಹುದು
ಅಧಿಕೃತ ವೆಬ್ ಸೈಟ್ ಲಿಂಕ್:- ಇಲ್ಲಿ ಕ್ಲಿಕ್ ಮಾಡಿ
https://ahara.karnataka.gov.in/nrc/PUBLIC_NEW_RATION_CARD/PUBLIC_NEW_RATION_CARD.aspx
ತಿದ್ದುಪಡಿ ಮಾಡಲು ಬೇಕಾಗುವ ದಾಖಲಾತಿಗಳು..?
- ಕುಟುಂಬದ ಸದಸ್ಯರ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ರೇಷನ್ ಕಾರ್ಡ್
- ಆರು ವರ್ಷದ ಒಳಗಿನ ಮಕ್ಕಳಿಗೆ ಜನನ ಪ್ರಮಾಣ ಪತ್ರ
- ಇತರೆ ಅಗತ್ಯ ದಾಖಲಾತಿಗಳು
ಸ್ನೇಹಿತರ ಇದೇ ರೀತಿ ಪ್ರತಿದಿನ ಹೊಸ ಮಾಹಿತಿಗಳನ್ನು ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ತಕ್ಷಣ ನೀವು
ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಭೇಟಿ ನೀಡಬಹುದು
Today Gold Price on 20 September – ಇಂದು ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ.! ಇಂದಿನ ಚಿನ್ನದ ದರ ಎಷ್ಟು..?