RRB Recruitment 2025: ರೈಲ್ವೆ ಇಲಾಖೆ ಹೊಸ ನೇಮಕಾತಿ.! 30,000+ ಖಾಲಿ ಹುದ್ದೆಗಳು.! ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೇ ಹತ್ತನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಮತ್ತು ಡಿಪ್ಲೋಮೋ ಹಾಗೂ ಪದವಿ ಪಾಸಾದಂತ ಅಭ್ಯರ್ಥಿಗಳಿಗೆ ಇದೀಗ ರೈಲ್ವೆ ಇಲಾಖೆಯಿಂದ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ ರೈಲ್ವೆ ಇಲಾಖೆ (RRB) ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ.! ಈ ಅಧಿಸೂಚನೆ ಪ್ರಕಾರ ಸುಮಾರು 30,000 ಕ್ಕಿಂತ ಹೆಚ್ಚು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಮಾಡಿದೆ ಹಾಗಾಗಿ ಈ ಒಂದು ಲೇಖನಿಯ ಮೂಲಕ ಈ ಹುದ್ದೆಗಳ ನೇಮಕಾತಿ ಕುರಿತು ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ
ರೈಲ್ವೆ ಇಲಾಖೆ (RRB Recruitment 2025) ಹೊಸ ನೇಮಕಾತಿ..?
ಸ್ನೇಹಿತರೆ ಭಾರತೀಯ ರೈಲ್ವೆ ಇಲಾಖೆ ಇದೀಗ ತನ್ನ ಆರ್ ಆರ್ ಬಿ ಗ್ರೂಪ್ ಡಿ ಹಾಗೂ ಇತರ ಹಲವಾರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ.! ಈ ಅಧಿಸೂಚನೆ ಪ್ರಕಾರ 30,307 ಹುದ್ದೆಗಳು ಖಾಲಿ ಇವೆ. ಹಾಗಾಗಿ ಆಸಕ್ತಿ ಇರುವಂತಹ ಹತ್ತನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಮತ್ತು ಡಿಪ್ಲೋಮೋ ಹಾಗೂ ಐಟಿಐ ಮತ್ತು ಪದವಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಹೌದು ಸ್ನೇಹಿತರೆ ನಾವು ಈ ಒಂದು ಲೇಖನ ಮೂಲಕ ಈ 30,000 ಕ್ಕಿಂತ ಹೆಚ್ಚು ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಕೆ ಮಾಡಬೇಕು ಮತ್ತು ಅರ್ಜಿ ಸಲ್ಲಿಕೆ ಮಾಡಲು ಹೊಂದಿರಬೇಕಾದ ಅರ್ಹತೆ ಹಾಗೂ ಇತರ ವಿವರಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ
ಭಾರತೀಯ ರೈಲ್ವೆ ಇಲಾಖೆ ಹುದ್ದೆಗಳ ನೇಮಕಾತಿ ವಿವರಗಳು..?
ನೇಮಕಾತಿ ಸಂಸ್ಥೆ:- ಭಾರತೀಯ ರೈಲ್ವೆ ಇಲಾಖೆ (RRB)
ಖಾಲಿ ಹುದ್ದೆಗಳ ಸಂಖ್ಯೆ:- 30,307 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 30/08/2025
ಅರ್ಜಿ ಕೊನೆಯ ದಿನಾಂಕ:- 29/09/2025
ಖಾಲಿ ಹುದ್ದೆಗಳ ವಿವರ:-
- ಮುಖ್ಯ ವಾಣಿಜ್ಯ/ಟಿಕೆಟ್ ಮೇಲ್ವಿಚಾರಕರ:- 6,235 ಖಾಲಿ ಹುದ್ದೆಗಳು
- ಸ್ಟೇಷನ್ ಮಾಸ್ಟರ್:- 3,562 ಖಾಲಿ ಹುದ್ದೆಗಳು
- ಟೈಪಿಸ್ಟ್ ಮತ್ತು ಜೂನಿಯರ್ ಅಕೌಂಟ್ ಅಸಿಸ್ಟೆಂಟ್:- 7,520 ಖಾಲಿ ಹುದ್ದೆಗಳು
- ಸೀನಿಯರ್ ಕ್ಲಾರ್ಕ್ ಮತ್ತು ಟೈಪಿಸ್ಟ್ ಹುದ್ದೆಗಳು:- 7,367 ಹುದ್ದೆಗಳು
ರೈಲ್ವೆ ಇಲಾಖೆ ಖಾಲಿ ಹುದ್ದೆಗಳಿಗೆ (RRB Recruitment 2025) ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರ ಭಾರತೀಯ ರೈಲ್ವೆ ಇಲಾಖೆ 30000 ಕ್ಕಿಂತ ಹೆಚ್ಚು ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು ಹಾಗೂ ಹುದ್ದೆಗಳ ಅನುಗುಣವಾಗಿ ದ್ವಿತೀಯ ಪಿಯುಸಿ ಹಾಗೂ ಐಟಿಐ ಮತ್ತು ಇಂಜಿನಿಯರಿಂಗ್ ಮತ್ತು ಡಿಪ್ಲೋಮೋ ಹಾಗೂ ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು
ವಯೋಮಿತಿ ಎಷ್ಟು:– ಭಾರತೀಯ ರೈಲ್ವೆ ಇಲಾಖೆಯ 30000 ಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ ಗರಿಷ್ಠ 32 ವರ್ಷದ ಒಳಗಿನವರು ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ ಹೆಚ್ಚಿನ ವಿವರಕ್ಕಾಗಿ ನೀವು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಸಂಬಳ ಎಷ್ಟು:- ಸ್ನೇಹಿತರೆ ಮೂವತ್ತು ಸಾವಿರಕ್ಕಿಂತ ಹೆಚ್ಚು ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ₹29,200 ರೂಪಾಯಿಯಿಂದ ಗರಿಷ್ಠ ₹35,400/- ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ
ಆಯ್ಕೆ ವಿಧಾನ:- ರೈಲ್ವೆ ಇಲಾಖೆ 30000 ಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸ ಅಭ್ಯರ್ಥಿಗಳನ್ನು ಮೊದಲು ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಮೇಲೆ ಆಯ್ಕೆ ಮಾಡಲಾಗುತ್ತದೆ ನಂತರ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಹಾಗೂ ದಾಖಲಾತಿ ಪರಿಶೀಲನೆ ಮತ್ತು ಇತರ ಆಧಾರಗಳ ಮೇಲೆ ಆಯ್ಕೆ ಮಾಡಲಾಗುತ್ತದೆ
ರೈಲ್ವೆ ಇಲಾಖೆ ಖಾಲಿ (RRB Recruitment 2025) ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರ ಮೊದಲು ನೀವು ರೈಲ್ವೆ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ 30,000 ಕ್ಕಿಂತ ಹೆಚ್ಚು ಹುದ್ದೆಗಳ ನೇಮಕಾತಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ ನಂತರ ಎಲ್ಲ ಮಾಹಿತಿಗಳನ್ನು ಸರಿಯಾಗಿ ಓದಿಕೊಂಡು ಕೆಳಗಡೆ ನೀಡಿರುವ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಸರ್ಕಾರಿ ಉದ್ಯೋಗ ಹಾಗೂ ಸರಕಾರಿ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನೆಲ್ ಗಳಿಗೆ ನೀವು ಸೇರಿಕೊಳ್ಳಬಹುದು