SBI Clerk Notification 2025: SBI ಬ್ಯಾಂಕ್ ಹೊಸ ನೇಮಕಾತಿ..! 6589 ಹುದ್ದೆಗಳು ಖಾಲಿ ಇವೆ ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತೆ ಕ್ಲರಿಕಲ್ ಕೇಡರ್ ಜೂನಿಯರ್ ಅಸೋಸಿಯೇಟ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಈ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು ಹಾಗೂ ಇತರ ವಿವರಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ
SBI ಹೊಸ ನೇಮಕಾತಿ ಅಧಿಸೂಚನೆ (SBI Clerk Notification 2025).?
ಹೌದು ಸ್ನೇಹಿತರೆ ನಮ್ಮ ದೇಶದ ಅತ್ಯಂತ ದೊಡ್ಡ ಹಾಗೂ ಪ್ರತಿಷ್ಠತ ಬ್ಯಾಂಕ್ ಯಾವುದೆಂದರೆ ಅದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತೆ ಜೂನಿಯರ್ ಅಸೋಸಿಯೇಟ್ಸ್ ಹುದ್ದೆಗಳ ಬರ್ತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಅಧಿಸೂಚನೆ ಪ್ರಕಾರ ಒಟ್ಟು 6589 ಹುದ್ದೆಗಳು ಖಾಲಿ ಇವೆ ಇದರಲ್ಲಿ ನಮ್ಮ ಕರ್ನಾಟಕದಲ್ಲಿ ಒಟ್ಟು 468 ಹುದ್ದೆಗಳು ಖಾಲಿ ಇವೆ ಹಾಗಾಗಿ ಆಸಕ್ತಿ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು

ಹೌದು ಸ್ನೇಹಿತರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬಿಡುಗಡೆ ಮಾಡಿರುವ ಈ ಹೊಸ ಅಧಿಸೂಚನೆ ಪ್ರಕಾರ ಒಟ್ಟು 6589 ಹುದ್ದೆಗಳ ಪೈಕಿ 1409 ಬ್ಯಾಕ್ ಲಾಗ್ ಹುದ್ದೆಗಳು ಸೇರಿವೆ ಮತ್ತು ಇದರಲ್ಲಿ ನಮ್ಮ ರಾಜ್ಯದಲ್ಲಿ ಒಟ್ಟು 468 ಹುದ್ದೆಗಳು ಖಾಲಿ ಇವೆ ಹಾಗೂ ಹನ್ನೊಂದು ಬ್ಯಾಕ್ ಲಾಗ್ ಹುದ್ದೆಗಳು ಸೇರಿವೆ ಹಾಗೂ 20 ಹುದ್ದೆಗಳು ಅಂಗವಿಕಲರಿಗೆ ಮೀಸಲಾಗಿದೆ ಮತ್ತು 198 ಬ್ಯಾಕ್ ಲಾಕ್ ಹುದ್ದೆಗಳು ಮಾಜಿ ಸೈನಿಕರಿಗೆ ಮೀಸಲಾಗಿವೆ ಒಟ್ಟು ಈ 6,589 ಹುದ್ದೆಗಳಲ್ಲಿ 810 ಹುದ್ದೆಗಳು ಮಾಜಿ ಸೈನಿಕರಿಗಾಗಿ ಕಾಯ್ದಿರಿಸಲಾಗಿದೆ
ಹಾಗಾಗಿ ನಾವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅರ್ಹತೆಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ
ಹುದ್ದೆಗಳ ನೇಮಕಾತಿ ವಿವರ (SBI Clerk Notification 2025)..?
ನೇಮಕಾತಿ ಸಂಸ್ಥೆ:- SBI ಬ್ಯಾಂಕ್
ಖಾಲಿ ಹುದ್ದೆಗಳ ಸಂಖ್ಯೆ:- 6,589 ಹುದ್ದೆಗಳು
ರಾಜ್ಯದಲ್ಲಿ ಕಾಲಿ ಹುದ್ದೆಗಳ ಸಂಖ್ಯೆ:- 468 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 06/08/2025
ಅರ್ಜಿ ಕೊನೆಯ ದಿನಾಂಕ:- 26/08/2025
ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು..?
ವಿದ್ಯಾರ್ಹತೆ:- ಈ ಅಧಿಕೃತ ಅಧಿಸೂಚನೆ ಪ್ರಕಾರ ಈ 6,589 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಪದವಿ ಪೂರ್ಣಗೊಳಿಸಿರಬೇಕು ಅಥವಾ ಅಂತಿಮ ಸೆಮಿಸ್ಟರ್ ನಲ್ಲಿ ವ್ಯಾಸಂಗ ಮಾಡುತ್ತಿದ್ದವರು ಅಂದರೆ ಡಿಸೆಂಬರ್ 31ರ ಒಳಗಡೆಯಾಗಿ ಉತ್ತೀರ್ಣರಾಗಿರಬೇಕು ಅಂತವರು ಅರ್ಜಿ ಸಲ್ಲಿಕೆ ಮಾಡಲು ಅವಕಾಶವಿದೆ
ವಯೋಮಿತಿ ಎಷ್ಟು:- ಈ 6589 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಒಂದು ಏಪ್ರಿಲ್ ಅನ್ವಯದಂತೆ ಕನಿಷ್ಠ 20 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿ 28 ವರ್ಷ ನಿಗದಿ ಮಾಡಲಾಗಿದೆ ಇದರ ಜೊತೆಗೆ ಮೀಸಲಾತಿ ಆಧಾರದ ಮೇಲೆ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 15 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ
ಸಂಬಳ ಎಷ್ಟು:- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಈ 6589 ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕನಿಷ್ಠ ₹24,050/- ಗರಿಷ್ಠ ₹64,480/- ವರೆಗೆ ಹುದ್ದೆಗಳ ಅನುಗುಣವಾಗಿ ಸಂಬಳ ನೀಡಲಾಗುತ್ತದೆ..! ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಆಯ್ಕೆಯ ವಿಧಾನ:– ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಿದ ಅಭ್ಯರ್ಥಿಗಳನ್ನು ಮೊದಲು ಆನ್ಲೈನ್ ಮೂಲಕ ಅಂದರೆ ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ಸ್ಥಳೀಯ ಭಾಷೆ ಪ್ರಾಣತ್ಯ ಹಾಗೂ ಇತರ ದಾಖಲಾತಿ ಪರಿಶೀಲನೆ ಮತ್ತು ಇತರ ವಿಧಾನಗಳನ್ನು ಆಧರಿಸಿ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ಮತ್ತು ಈ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶವಿದೆ
ಅರ್ಜಿ ಶುಲ್ಕ ಎಷ್ಟು:- ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಾಗಿದ್ದರೆ ಅಂತವರಿಗೆ ಅರ್ಜಿ ಶುಲ್ಕದ ವಿನಾಯಿತಿ ನೀಡಲಾಗಿದೆ ಮತ್ತು ಉಳಿದ ಅಭ್ಯರ್ಥಿಗಳಿಗೆ ರೂ.750 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ
ಖಾಲಿ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಕೆ ಮಾಡಬೇಕು..?
ಸ್ನೇಹಿತರೆ ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಬಯಸುತ್ತಿದ್ದರೆ ಮೊದಲು ಈ ಒಂದು ಹುದ್ದೆಗಳ ನೇಮಕಾತಿ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಎಲ್ಲಾ ಮಾಹಿತಿ ಸರಿಯಾಗಿ ತಿಳಿದುಕೊಳ್ಳಿ ನಂತರ ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಅಧಿಸೂಚನೆ ಬೇಕಾದರೆ ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಪ್ರತಿದಿನ ಹೊಸ ವಿಷಯಗಳು ಹಾಗೂ ಸರಕಾರಿ ಹುದ್ದೆಗಳು ಮತ್ತು ಸರಕಾರಿ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿ ಪಡೆಯಲು
ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು