SBI Scholarship 2025: SBI ಬ್ಯಾಂಕ್ ಮೂಲಕ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! ರೂ.15,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ
ನಮಸ್ಕಾರ ಗೆಳೆಯರೇ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಬ್ಯಾಂಕ್ ಮೂಲಕ ಇದೀಗ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್. ಹೌದು ಗೆಳೆಯರೆ SBI ಬ್ಯಾಂಕ್ ತನ್ನ 75ನೇ ವಾರ್ಷಿಕೋತ್ಸವದ ಅಂಗವಾಗಿ “SBI ಪ್ಲಾಟಿನಂ ಜುಬಿಲಿ ಆಶಾ ಸ್ಕಾಲರ್ಶಿಪ್” ಆರಂಭಿಸಿದೆ ಈ ಒಂದು ವಿದ್ಯಾರ್ಥಿ ವೇತನದ ಮೂಲಕ ವಿದ್ಯಾರ್ಥಿಗಳು ಬರೋಬ್ಬರಿ 15000 ಯಿಂದ 20 ಲಕ್ಷ ರೂಪಾಯಿವರೆಗೆ ವಿದ್ಯಾರ್ಥಿ ವೇತನ ಪಡೆದುಕೊಳ್ಳಬಹುದು ಹಾಗಾಗಿ ನಾವು ಈ ಸ್ಕಾಲರ್ಶಿಪ್ ಯೋಜನೆಗೆ ಸಂಬಂಧಿಸಿದ ಮಾಹಿತಿ ತಿಳಿದುಕೊಳ್ಳೋಣ
ಎಸ್ ಬಿ ಐ ಆಶಾ ಸ್ಕಾಲರ್ಶಿಪ್ ಯೋಜನೆ (SBI Scholarship 2025).?
ಹೌದು ಸ್ನೇಹಿತರೆ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ 75ನೇ ವಾರ್ಷಿಕೋತ್ಸವದ ಅಂಗವಾಗಿ ಇದೀಗ ವಿದ್ಯಾರ್ಥಿಗಳಿಗೆ ಹೊಸ ಸ್ಕಾಲರ್ಶಿಪ್ ಯೋಜನೆಯನ್ನು ಘೋಷಣೆ ಮಾಡಿದೆ.! ಹೌದು ಗೆಳೆಯರೇ ತನ್ನ ಎಸ್ ಬಿ ಐ ಫೌಂಡೇಶನ್ ವತಿಯಿಂದ sbi ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿ ವೇತನ ಆರಂಭಮಾಡಿದೆ ಈ ಒಂದು ವಿದ್ಯಾರ್ಥಿ ವೇತನದ ಮೂಲಕ ವಿದ್ಯಾರ್ಥಿಗಳು ಕನಿಷ್ಠ ₹15,000 ರಿಂದ ಗರಿಷ್ಠ 20 ಲಕ್ಷ ರೂಪಾಯಿವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಲು ಅವಕಾಶ ಇರುತ್ತದೆ..

ಹೌದು ಸ್ನೇಹಿತರೆ SBI ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನ ಆರಂಭಿಸಿದೆ ಈ ಒಂದು ವಿದ್ಯಾರ್ಥಿ ವೇತನದ ಮೂಲಕ ಶಾಲೆಗಳು ಹಾಗೂ ಕಾಲೇಜುಗಳು ಮತ್ತು ವೈದ್ಯಕೀಯ ಕಾಲೇಜುಗಳು ಹಾಗೂ IIT, IIM, ಮತ್ತು ವಿದೇಶಗಳಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು ಹಾಗೂ ಈ ವರ್ಷ ಈ ವಿದ್ಯಾರ್ಥಿ ವೇತನ ಮೂಲಕ ಒಟ್ಟು 23,230 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಹಾಗಾಗಿ ಆಸಕ್ತಿ ಇರುವವರು 15 ನವೆಂಬರ್ 2025 ರ ಒಳಗಡೆ ಅರ್ಜಿ ಸಲ್ಲಿಕೆ ಮಾಡಿ
ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು..?
ಸ್ನೇಹಿತರೆ SBI ಪ್ಲಾಟಿನಂ ಆಶಾ ಜುಬಿಲಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು 9 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಮತ್ತು ಅಗ್ರ 300 NIRF ವಿಶ್ವವಿದ್ಯಾಲಯಗಳು/ಕಾಲೇಜುಗಳು ಮತ್ತು IIT ಗಳಿಂದ ಪದವಿಪೂರ್ವ ಮತ್ತು ಸ್ನಾತಕೋತ್ತರ ಕೋರ್ಸ್‌ಗಳನ್ನು ಅಥವಾ IIM ಗಳಿಂದ MBA/PGDM ಕೋರ್ಸ್‌ಗಳನ್ನು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ಇರುತ್ತದೆ ಹಾಗಾಗಿ ಆಸಕ್ತಿ ಇರುವವರು ಬೇಗ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಿ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Apply eligibility criteria for SBI Scholarship 2025).?
- ವಿದ್ಯಾರ್ಥಿಗಳು ಪ್ರಸ್ತುತ ವರ್ಷದಲ್ಲಿ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಯನ ಮಾಡುತ್ತಿರಬೇಕು
- ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 3 ಲಕ್ಷಕ್ಕಿಂತ ಕಡಿಮೆ ಇರಬೇಕು
- ವಿದೇಶದಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ಆರು ಲಕ್ಷ ರೂಪಾಯಿಗಿಂತ ಕಡಿಮೆ ಇರಬೇಕು
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಇಂದಿನ ತರಗತಿಯಲ್ಲಿ 75% ರಷ್ಟು ಅಂಕ ಗಳಿಸಿರಬೇಕು ಅಂತವರು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ
- SBI ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿನಿಯರಿಗೆ ಶೇಕಡ 50ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇಕಡ 50ರಷ್ಟು ಮೀಸಲಾಗಿ ನೀಡಲಾಗುತ್ತದೆ ಹಾಗೂ ಅಂಕಗಳಲ್ಲಿ ಕನಿಷ್ಠ 10% ಕಡಿಮೆ ಮಾಡಲಾಗುತ್ತದೆ
- SBI ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮೊದಲು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಈ ಒಂದು ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡು ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸುವುದು ಹೇಗೆ (How To Apply for SBI Scholarship 2025).?
ಸ್ನೇಹಿತರೆ ನೀವು SBI ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಲು ಬಯಸುತ್ತಿದ್ದರೆ ಮೊದಲು ನೀವು sbiashascholarship.co.in ಜಾಲತಾಣಕ್ಕೆ ಭೇಟಿ ನೀಡಿ ಹೆಚ್ಚಿನ ವಿವರ ತಿಳಿದುಕೊಳ್ಳಿ ನಂತರ ದಿನಾಂಕ 15 ನವೆಂಬರ್ 2025 ರ ಒಳಗಡೆ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಮೇಲೆ ಕೊಟ್ಟಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕದ ಒಳಗಡೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು
ಇದೇ ರೀತಿ ಪ್ರತಿದಿನ ಹೊಸ ಮಾಹಿತಿ ಪಡೆದುಕೊಳ್ಳಲು ಆಸಕ್ತಿ ಇದೆಯಾ ಹಾಗಾದರೆ ನೀವು
ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಭೇಟಿ ನೀಡಬಹುದು