Scholarship Application: ಈ ವರ್ಗದ ವಿದ್ಯಾರ್ಥಿಗಳಿಗೆ ಸಿಗಲಿದೆ ಸ್ಕಾಲರ್ಶಿಪ್.! ಬೇಗ ಅರ್ಜಿ ಸಲ್ಲಿಸಿ ಕೊನೆಯ ದಿನಾಂಕ ಇದೆ
ನಮಸ್ಕಾರ ಸ್ನೇಹಿತರೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಇದೀಗ ತನ್ನ ಇಲಾಖೆ ಅಡಿಯಲ್ಲಿ ಬರುವ ವಿವಿಧ ವರ್ಗಗಳ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗ ಮಾಡಲು ಆರ್ಥಿಕ ನೆರವು ನೀಡುವ ಉದ್ದೇಶದಿಂದ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಆಹ್ವಾನ ಮಾಡಿದೆ ಹಾಗಾಗಿ ಆಸಕ್ತಿ ಇರುವಂತ ವಿದ್ಯಾರ್ಥಿಗಳು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಆರ್ಥಿಕ ನೆರವು ಪಡೆಯಬಹುದು
ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಆಹ್ವಾನ..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಇದೀಗ ತನ್ನ ಇಲಾಖೆ ಅಡಿಯಲ್ಲಿ ಬರುವಂತ ವಿವಿಧ ವರ್ಗಗಳಿಗೆ ಸೇರಿದ ಹಿಂದುಳಿದ ಮತ್ತು ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ವೆಚ್ಚ ಬರಸುವ ಉದ್ದೇಶದಿಂದ ಅರ್ಹ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನೀಡಲು ಇದೀಗ ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಿದೆ.

ಆದ್ದರಿಂದ ಮೆಟ್ರಿಕ್ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅಂದರೆ ದ್ವಿತೀಯ ಪಿಯುಸಿ ಹಾಗೂ ಪದವಿ ಮತ್ತು ಇಂಜಿನಿಯರಿಂಗ್ ಮತ್ತು ಇತರ ವೃತ್ತಿಪರ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಕೆಲವೊಂದು ಅರ್ಹತೆ ನಿಗದಿ ಮಾಡಲಾಗಿದೆ ಇದಕ್ಕೆ ಸಂಬಂಧಿಸಿದ ವಿವರ ಕೆಳಗಡೆ ತಿಳಿಸಲಾಗಿದೆ
ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
- ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ನೋಂದಣಿ ಆಗಿರುವ ವರ್ಗಕ್ಕೆ ಸೇರಿರಬೇಕು
- ಈ ವಿದ್ಯಾರ್ಥಿ ವೇತನ ಪಡೆಯಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ನಮ್ಮ ಕರ್ನಾಟಕದ ನಿವಾಸಿಗಳಾಗಿರಬೇಕು
- ಅಲ್ಪಸಂಖ್ಯಾತರ ಇಲಾಖೆಯ ವತಿಯಿಂದ ಸ್ಕಾಲರ್ಶಿಪ್ ಪಡೆಯಲು ಬಯಸುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2 ಲಕ್ಷ ರೂಪಾಯಿ ಮೀರಬಾರದು
- ಅಲ್ಪಸಂಖ್ಯಾತರ ಇಲಾಖೆಯ ಮೂಲಕ ಸ್ಕಾಲರ್ಶಿಪ್ ಪಡೆಯಲು ಬಯಸುವ ವಿದ್ಯಾರ್ಥಿಗಳು, PUC, ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್, ತಾಂತ್ರಿಕ ಕೋರ್ಸ್ಗಳು, PG, ಹಾಗೂ ಇತರ ವೃತ್ತಿಪರ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿದ್ದರೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು..?
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್ ವಿವರಗಳು
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಕಾಲೇಜು ಪ್ರವೇಶ ಶುಲ್ಕದ ರಶೀದಿ
- ವಿದ್ಯಾರ್ಥಿಯ ಇತ್ತೀಚಿನ ಫೋಟೋಸ್
- ಇಂದಿನ ತರಗತಿಯ ಅಂಕ ಪಟ್ಟಿಗಳು
- ಮೊಬೈಲ್ ನಂಬರ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಮತ್ತು ಅರ್ಜಿ ಸಲ್ಲಿಸುವುದು ಹೇಗೆ..?
ಅಲ್ಪಸಂಖ್ಯಾತರ ಇಲಾಖೆ ಅಡಿಯಲ್ಲಿ ನೀವು ಸ್ಕಾಲರ್ಶಿಪ್ ಪಡೆಯಲು ಬಯಸುತ್ತಿದ್ದರೆ ಮೇಲೆ ತಿಳಿಸಿದ ಎಲ್ಲಾ ಅರ್ಹತೆಗಳನ್ನು ಹೊಂದಿರಬೇಕು. ಮತ್ತು ನೀವು ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ SSP ಪೋರ್ಟಲ್ ಮೂಲಕ ಆನ್ಲೈನಲ್ಲಿ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:- 30/09/2025
ಇದೇ ರೀತಿ ನಿಮಗೆ ವಿದ್ಯಾರ್ಥಿ ವೇತನಗಳಿಗೆ ಸಂಬಂಧಿಸಿದ ಮಾಹಿತಿ ಹಾಗೂ ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ಪ್ರಚಲಿತ ಘಟನೆಗಳು ಮಾಹಿತಿ ನೀವು ಪ್ರತಿದಿನ ಪಡೆದುಕೊಳ್ಳಲು ಬಯಸುತ್ತಿದ್ದೀರಾ ಹಾಗಾದ್ರೆ ತಕ್ಷಣ ನೀವು WhatsApp & Telegram ಸೋಶಿಯಲ್ ಮೀಡಿಯಾ ಚಾನಲ್ಗಳಿಗೆ ಸೇರಿಕೊಳ್ಳಬಹುದು
Today Gold Rate Drop: ವಾರದ ಮೊದಲ ದಿನ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ.! ಇಂದಿನ ಚಿನ್ನದ ಬೆಲೆ ಎಷ್ಟು..?